ಗದಗ: ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯಕ್ಕೆ ಶಾಪ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಿರುವುದನ್ನು ನಾನು ಗಮನಿಸಿದ್ದೇನೆ. ಆದರೆ ನನ್ನ ಪ್ರಕಾರ, ಕಾಂಗ್ರೆಸ್ ಪಕ್ಷ 60 ವರ್ಷ ರಾಜ್ಯಕ್ಕೆ ಮಾತ್ರವಲ್ಲದೇ, ಇಡೀ ದೇಶಕ್ಕೆ ಶಾಪವಾಗಿತ್ತು ಎಂದು ಸಚಿವ ಶ್ರೀರಾಮುಲು ವಾಗ್ದಾಳಿ ನಡೆಸಿದರು.
60 ವರ್ಷಗಳ ಕಾಂಗ್ರೆಸ್ ಆಡಳಿತ ರಾಜ್ಯಕ್ಕಷ್ಟೇ ಅಲ್ಲ, ಇಡೀ ದೇಶಕ್ಕೆ ಶಾಪ: ಶ್ರೀರಾಮುಲು - the 60 year congress was a curse for the country
ಕಾಂಗ್ರೆಸ್ ಪಕ್ಷ 60 ವರ್ಷ ಕರ್ನಾಟಕ ರಾಜ್ಯಕ್ಕೆ ಮಾತ್ರವಲ್ಲ, ಇಡೀ ದೇಶಕ್ಕೆ ಶಾಪವಾಗಿತ್ತು ಅಂತ ಕಾಂಗ್ರೆಸ್ ವಿರುದ್ಧ ಸಚಿವ ಶ್ರೀರಾಮುಲು ವಾಗ್ದಾಳಿ ನಡೆದಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಶಾಪದಿಂದ ಮುಕ್ತವಾಗಿ ದೇಶದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಿದೆ. ರಾಜ್ಯದಲ್ಲಿ ಬೊಮ್ಮಾಯಿ ಸರ್ಕಾರ ಸಮರ್ಥವಾಗಿದೆ. ರಾಜ್ಯದ ಜನರ ಅಭಿವೃದ್ಧಿಗೆ ಬಿಜೆಪಿ ಪಕ್ಷ ಬದ್ಧ ಎಂದರು.
ಮೈಸೂರಿನಲ್ಲಿ ನಡೆದ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಕಾಂಗ್ರೆಸ್‌ನವರು ತನಿಖೆಗೆ ಪ್ರತ್ಯೇಕ ಸಮಿತಿ ರಚನೆ ಮಾಡಿದ್ದಾರೆ. ಮಹಿಳೆಯರಿಗೆ ರಕ್ಷಣೆ ಕೊಡುವಲ್ಲಿ ನಮ್ಮ ಸರ್ಕಾರ ಬದ್ಧವಾಗಿದೆ. ಈಗಾಗಲೇ ಆರೋಪಿಗಳ ಬಂಧನವಾಗಿದೆ. ಆದರೆ ಕಾಂಗ್ರೆಸ್ ಅಧಿಕಾರ ಕಳೆದುಕೊಂಡಿದ್ದು, ಇದೀಗ ಹಗಲುಗನಸು ಕಾಣುತ್ತಿದ್ದಾರೆ ಎಂದರು.