ಕರ್ನಾಟಕ

karnataka

ETV Bharat / state

ಸಚಿವ ಸಂಪುಟ ಪುನರ್ ರಚನೆ ಬಗ್ಗೆ ನನಗೆ ಮಾಹಿತಿ ಇಲ್ಲ: ಸಚಿವ ಸಿ.ಸಿ ಪಾಟೀಲ್ - Minister CC Patil statement in gadag

ಪಕ್ಷದ ವರಿಷ್ಠರು ಕೈಗೊಳ್ಳುವ ನಿರ್ಧಾರಕ್ಕೆ ಬದ್ಧ. ಸಚಿವ ಸಂಪುಟ ಪುನರ್ ರಚನೆ ಬಗ್ಗೆ ನನಗೆ ಮಾಹಿತಿ ಇಲ್ಲ. ಗುಜರಾತ್ ಮಾದರಿಯಲ್ಲಿ ಸಚಿವ ಸಂಪುಟ ರಚನೆಯಾಗುತ್ತದೆ ಎಂಬ ವಿಚಾರದ ಬಗ್ಗೆ ನನಗೆ ತಿಳಿದಿಲ್ಲ ಎಂದು ಸಚಿವ ಸಿ.ಸಿ ಪಾಟೀಲ್ ತಿಳಿಸಿದರು.

Minister CC Patil
ಸಚಿವ ಸಿ. ಸಿ ಪಾಟೀಲ್

By

Published : Jan 4, 2022, 7:36 AM IST

ಗದಗ:ಸಂಕ್ರಾಂತಿ ಬಳಿಕ ಸಚಿವ ಸಂಪುಟ ಬದಲಾವಣೆ ಬಗ್ಗೆ ನನಗೇನೂ ಗೊತ್ತಿಲ್ಲ. ನಾನು ಬಿಜೆಪಿ ಪಕ್ಷದ ಶಿಸ್ತಿನ ಸಿಪಾಯಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ ಪಾಟೀಲ್ ಹೇಳಿದ್ದಾರೆ.

ಸಚಿವ ಸಂಪುಟ ಪುನರ್ ರಚನೆ ಬಗ್ಗೆ ಸಚಿವ ಸಿ.ಸಿ ಪಾಟೀಲ್ ಪ್ರತಿಕ್ರಿಯೆ

ಗದಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಕ್ಷದ ವರಿಷ್ಠರು ಕೈಗೊಳ್ಳುವ ನಿರ್ಧಾರಕ್ಕೆ ಬದ್ಧ. ಸಚಿವ ಸಂಪುಟ ಪುನರ್ ರಚನೆ ಬಗ್ಗೆ ನನಗೆ ಮಾಹಿತಿ ಇಲ್ಲ. ಗುಜರಾತ್ ಮಾದರಿಯಲ್ಲಿ ಸಚಿವ ಸಂಪುಟ ರಚನೆಯಾಗುತ್ತದೆ ಎಂಬ ವಿಚಾರದ ಬಗ್ಗೆ ನನಗೆ ತಿಳಿದಿಲ್ಲ ಎಂದರು. ಇನ್ನು ಹಿರಿಯ ಸಚಿವರನ್ನ ಸಂಪುಟದಿಂದ ಕೈ ಬಿಡ್ತಾರೆ ಎಂಬ ವಿಚಾರಕ್ಕೆ ಪ್ರತಿಕ್ರಿಯೆ ನೀಡಲು ಸಚಿವ ಸಿ.ಸಿ ಪಾಟೀಲ್ ನಿರಾಕರಿಸಿದರು.

3ನೇ ಅಲೆಯ ಆತಂಕದಲ್ಲಿದ್ದೇವೆ:

ಸದ್ಯಕ್ಕೆ ಲಾಕ್​​ಡೌನ್ ವಿಚಾರ ಇಲ್ಲ. ಆದರೆ, 3ನೇ ಅಲೆಯ ಆತಂಕದಲ್ಲಿದ್ದೇವೆ. ನಿತ್ಯದ ಕೇಸ್​​ಗಳನ್ನು ನೋಡಿದರೆ 3ನೇ ಅಲೆ ಬರಬಹುದು ಎನ್ನುವ ಆತಂಕದಲ್ಲಿದ್ದೇವೆ. ಆರಂಭದಲ್ಲೇ ನಿಯಂತ್ರಣಕ್ಕೆ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ.

ಜನರ ಆರೋಗ್ಯದ ರಕ್ಷಣೆಗೆ ಆದ್ಯತೆ ನೀಡಲಾಗುತ್ತಿದೆ. ಜನರ ಸಹಭಾಗಿತ್ವ ಇದ್ದರೆ ಮಹಾಮಾರಿ ಎದುರಿಸಲು ಸಾಧ್ಯ. ಕಠಿಣ ನಿಯಮ ಮಾಡಬಾರದು ಎಂದರೆ ನಮ್ಮಷ್ಟಕ್ಕೆ ನಾವು ಕಠಿಣ ನಿಯಮಗಳನ್ನು ಪಾಲಿಸಬೇಕು ಎಂದು ಸಚಿವರು ಸಲಹೆ ನೀಡಿದರು.

ಒಮಿಕ್ರಾನ್​​ ಮೊದಲ ಮತ್ತು 2ನೇ ಅಲೆಗಿಂತ ತೀವ್ರವಾಗಿ ಹರಡುವ ಸಾಧ್ಯತೆ ಇದೆ. ಮಹಾರಾಷ್ಟ್ರದಲ್ಲಿ ಶಾಸಕರು, ಸಚಿವರನ್ನು ನೋಡಿದರೆ ತಿಳಿಯುತ್ತದೆ. ಬೇಕಾಬಿಟ್ಟಿ ಮಾಡಿದರೆ ಸರ್ಕಾರ ಕಠಿಣ ನಿಯಮಗಳ ಮೊರೆ ಹೋಗುವುದು ಅನಿವಾರ್ಯ ಎಂದು ಎಚ್ಚರಿಕೆ ನೀಡಿದ್ದಾರೆ. ಜಿಲ್ಲೆಯಲ್ಲಿ ಒಂದೆರೆಡು ದಿನದಲ್ಲಿ ಅಧಿಕಾರಿಗಳೊಂದಿಗೆ ಸಭೆ ಮಾಡಿ ಏನೇನು ಕ್ರಮ ಕೈಗೊಳ್ಳಬೇಕು ಎಂಬುವುದರ ಬಗ್ಗೆ ಚರ್ಚೆ ಮಾಡುತ್ತೇವೆ ಎಂದರು.

ಇದನ್ನೂ ಓದಿ:ಸಲೀಂ ಅಹ್ಮದ್ ಸ್ಥಾನಕ್ಕೆ ಎಸ್​​.ಆರ್ ಪಾಟೀಲ್ ನೇಮಕಕ್ಕೆ ಕೆಪಿಸಿಸಿ ಚಿಂತನೆ

ABOUT THE AUTHOR

...view details