ಗದಗ:ಸಚಿವ ಸಿ.ಸಿ. ಪಾಟೀಲ್ ಆರೋಗ್ಯದಲ್ಲಿ ದಿಢೀರ್ ಏರುಪೇರು ಉಂಟಾಗಿ ಆಸ್ಪತ್ರೆಗೆ ದಾಖಲಾಗಿ ಡಿಸ್ಚಾರ್ಜ್ ಆಗಿರುವ ವಿಚಾರ ಬೆಳೆಕಿಗೆ ಬಂದಿದೆ.
ಸಚಿವ ಸಿ.ಸಿ. ಪಾಟೀಲ್ ಆರೋಗ್ಯದಲ್ಲಿ ದಿಢೀರ್ ಏರುಪೇರು
ಗದಗ ಜಿಲ್ಲಾ ಉಸ್ತುವಾರಿ ಹಾಗೂ ಗಣಿ ಮತ್ತು ಭೂವಿಜ್ಞಾನ, ಪರಿಸರ ಇಲಾಖೆ ಸಚಿವ ಸಿ.ಸಿ. ಪಾಟೀಲ್ ಆ್ಯಸಿಡಿಟಿ ಹಾಗೂ ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಡಿಸ್ಚಾರ್ಜ್ ಆಗಿರುವ ಸಚಿವರು ವೈದ್ಯರ ಸಲಹೆ ಮೇರೆಗೆ ಗ್ರಾಮ ನರಗುಂದಕ್ಕೆ ತೆರಳಿ ವಿಶ್ರಾಂತಿ ಪಡೆಯುತ್ತಿದ್ದಾರೆ.
ಗದಗ ಜಿಲ್ಲಾ ಉಸ್ತುವಾರಿ ಹಾಗೂ ಗಣಿ ಮತ್ತು ಭೂವಿಜ್ಞಾನ, ಪರಿಸರ ಇಲಾಖೆ ಸಚಿವ ಸಿ.ಸಿ ಪಾಟೀಲ್ ಆ್ಯಸಿಡಿಟಿ ಹಾಗೂ ಹೈಬಿಪಿ ಸಮಸ್ಯೆಯಿಂದ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿರಾಯು ಖಾಸಗಿ ಆಸ್ಪತ್ರೆ ವೈದ್ಯರಾದ ಡಾಕ್ಟರ್ ಶ್ವೇತಾ ಸಂಕನೂರ, ಗದಗ ಜಿಮ್ಸ್ ಆಸ್ಪತ್ರೆಯ ಫಿಜಿಸಿಯನ್ ಸಂಗಮೇಶ ಅಸೂಟಿ, ಸರ್ಜನ್ ಡಾ. ಬಸನಗೌಡ ಕರಿಗೌಡ್ರ ಅವರು ಸಚಿವರಿಗೆ ಚಿರಾಯು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ್ದಾರೆ.
ಸಚಿವರ ಆರೋಗ್ಯದಲ್ಲಿ ಯಾವುದೇ ಅಪಾಯವಿಲ್ಲ. ಸದ್ಯ ಗುಣಮುಖರಾಗಿದ್ದಾರೆ ಎಂದು ವೈದ್ಯಕೀಯ ಮೂಲಗಳು ದೃಢಪಡಿಸಿವೆ. ಇನ್ನು ಚಿಕಿತ್ಸೆ ಪಡೆದು ವೈದ್ಯರ ಸಲಹೆ ಮೇರೆಗೆ ಸಚಿವ ಸಿ.ಸಿ. ಪಾಟೀಲ್ ಸ್ವಗ್ರಾಮ ನರಗುಂದಕ್ಕೆ ತೆರಳಿ ವಿಶ್ರಾಂತಿ ಪಡೆಯುತ್ತಿದ್ದಾರೆ.