ಕರ್ನಾಟಕ

karnataka

ETV Bharat / state

ಮಹಾರಾಷ್ಟ್ರದಲ್ಲಿ ಗಲಾಟೆ ಮಾಡಿದವರೆಲ್ಲಾ ಕಾಂಗ್ರೆಸ್ಸಿಗರು : ಸಚಿವ ಶ್ರೀರಾಮುಲು - ಸಚಿವ ಶ್ರೀರಾಮುಲು

ಎಂಇಎಸ್ ಬ್ಯಾನ್​​ಗೆ ಕನ್ನಡ ಪರ ಸಂಘಟನೆಗಳು ಆಗ್ರಹ ವಿಚಾರದ ಕುರಿತು ಮಾತನಾಡಿ, ಎಂಇಎಸ್ ಬ್ಯಾನ್ ಮಾಡುವ ವಿಚಾರಕ್ಕೆ ಸಂಪೂರ್ಣ ಬೆಂಬಲವಿದೆ. ಬ್ಯಾನ್ ಮಾಡುವುದರಿಂದ ಅನುಕೂಲ ಆಗುತ್ತದೆ. ಈ ಬಗ್ಗೆ ಕೇಂದ್ರಕ್ಕೆ ಸಾಕಷ್ಟು ವರದಿಯನ್ನೂ ನೀಡಿದ್ದೇವೆ ಎಂದು ಹೇಳಿದರು..

Minister Sriramulu reaction about MES
ಸಚಿವ ಶ್ರೀರಾಮುಲು

By

Published : Dec 20, 2021, 1:33 PM IST

ಗದಗ: ಮಹಾರಾಷ್ಟ್ರದಲ್ಲಿ ಗಲಾಟೆ ಮಾಡಿದವರೆಲ್ಲಾ ಕಾಂಗ್ರೆಸ್ಸಿಗರು. ಗಲಭೆ ಮಾಡಿದವರಲ್ಲಿ ಕೆಲವರು ಕಿಡಿಗೇಡಿಗಳು, ಕಾಂಗ್ರೆಸ್ ಪಕ್ಷದ ಚೇಲಾಗಳಿದ್ದಾರೆ. ಹಾಗಾಗಿ, ಎಂಇಎಸ್ ಯಾವುದೇ ಪಕ್ಷದಲ್ಲಿದ್ದರೂ ಅರೆಸ್ಟ್ ಮಾಡುವ ಕೆಲಸ ಆಗುತ್ತದೆ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಹೇಳಿದರು.

ಗದಗನಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಅವರು ಮಾತನಾಡಿ, ಸ್ವಾತಂತ್ರ್ಯ ಹೋರಾಟಗಾರರ ಪ್ರತಿಮೆ ಮೇಲೆ ದಾಳಿಗಳಾಗಿವೆ. ನನಗೆ ಗೊತ್ತಿರುವಂತೆ ಕೆಲವು ಕಾಂಗ್ರೆಸ್ ಕಾರ್ಯಕರ್ತರು ಇದ್ದಾರೆ. ಕರ್ನಾಟಕದಲ್ಲಿ ಇರುವ ಕೆಲವು ಪುಂಡರು ಕುಮ್ಮಕ್ಕು ನೀಡಿದ್ದಾರೆ. ಈ ಬಗ್ಗೆ ತನಿಖೆ ನಡೆಯುತ್ತಿದೆ. ಕಾಂಗ್ರೆಸ್, ಎಂಇಎಸ್ ಯಾರೇ ಇದ್ದರೂ ಕ್ಷಮಿಸುವ ಪ್ರಶ್ನೆ ಇಲ್ಲಾ ಎಂದರು.

ಮಹಾನ್ ನಾಯಕರಿಗೆ ಅಗೌರವ ತೋರಿದವರನ್ನು ಅರೆಸ್ಟ್ ಮಾಡುವ ತೀರ್ಮಾನ ತೆಗೆದುಕೊಂಡಿದೆ. ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ದುಷ್ಕೃತ್ಯಕ್ಕೆ ಕುಮ್ಮಕ್ಕು ಕೊಡುತ್ತಿದ್ದಾರೆ. ಟ್ವೀಟ್ ಮಾಡುವ ಮೂಲಕ ಪ್ರಚೋದನೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು.

ಕಾಂಗ್ರೆಸ್‌ ವಿರುದ್ಧ ಸಚಿವ ಶ್ರೀರಾಮುಲು ವಾಗ್ದಾಳಿ ನಡೆಸಿರುವುದು..

ಬೆಳಗಾವಿಯಲ್ಲಿ ಅಧಿವೇಶನ ನಡೆಯುವ ಸಂದರ್ಭದಲ್ಲಿ ಇಂಥ ಘಟನೆಗಳು ನಡೆಯುತ್ತಿವೆ. ಗಲಾಟೆ ಮಾಡುವ ಸಂಪ್ರದಾಯವನ್ನು ಎಂಇಎಸ್ ಮೈಗೂಡಿಸಿಕೊಂಡು ಬಂದಿದೆ. ಸಮಗ್ರ ಅಭಿವೃದ್ಧಿ ನಿಟ್ಟಿನಲ್ಲಿ ಸದನ ನಡೆಯುತ್ತಿದೆ. ಗಲಾಟೆ ಸಂಪ್ರದಾಯ ಕನ್ನಡಿಗರು ಸಹಿಸಲ್ಲ ಎಂದು ಎಚ್ಚರಿಸಿದರು.

ಅಧಿವೇಶನ ನಡೆಯಲು ಕಾಂಗ್ರೆಸ್ ನಾಯಕರು ಬಿಡುತ್ತಿಲ್ಲ. ರಾಜಕಾರಣದಲ್ಲಿ ಕಾಂಗ್ರೆಸ್ ನಾಟಕ ಜೋರಾಗಿದೆ. ಅಧಿವೇಶನ ನಡೆಸಲು ಕಾಂಗ್ರೆಸ್ ನಾಯಕರು ಅನುವು ಮಾಡಿಕೊಡಬೇಕು. ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ಯಾಗಬೇಕಿದೆ ಎಂದು ಹೇಳಿದರು.

ಎಂಇಎಸ್ ಬ್ಯಾನ್​​ಗೆ ಕನ್ನಡ ಪರ ಸಂಘಟನೆಗಳು ಆಗ್ರಹ ವಿಚಾರದ ಕುರಿತು ಮಾತನಾಡಿ, ಎಂಇಎಸ್ ಬ್ಯಾನ್ ಮಾಡುವ ವಿಚಾರಕ್ಕೆ ಸಂಪೂರ್ಣ ಬೆಂಬಲವಿದೆ. ಬ್ಯಾನ್ ಮಾಡುವುದರಿಂದ ಅನುಕೂಲ ಆಗುತ್ತದೆ. ಈ ಬಗ್ಗೆ ಕೇಂದ್ರಕ್ಕೆ ಸಾಕಷ್ಟು ವರದಿಯನ್ನೂ ನೀಡಿದ್ದೇವೆ ಎಂದು ಹೇಳಿದರು.

ಇನ್ನು ಸಿಎಂ ಬದಲಾವಣೆ ವಿಚಾರವನ್ನು ಪಕ್ಷ ತೀರ್ಮಾನ ತೆಗೆದುಕೊಳ್ಳುತ್ತದೆ. ಯಾವುದೇ ಬದಲಾವಣೆ ಇಲ್ಲ. ಕೇವಲ ಊಹಾಪೋಹ. ಯಾರೋ ಮಾತಾಡ್ತಾರೆ. ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ 2023ರ ಚುನಾವಣೆ ನಡೆಯಲಿದೆ ಎಂದು ನಮ್ಮ ರಾಷ್ಟ್ರೀಯ ನಾಯಕ ಅಮಿತ್ ಶಾ ಅವರೇ ಸ್ಪಷ್ಟವಾಗಿ ಹೇಳಿದ್ದಾರೆ. ಬಿಜೆಪಿ ಅಧ್ಯಕ್ಷ ಸ್ಥಾನದ ಬಗ್ಗೆಯೂ ಪಕ್ಷ ತೀರ್ಮಾನ ತೆಗೆದುಕೊಳ್ಳಲಿದೆ ತಿಳಿಸಿದರು.

ABOUT THE AUTHOR

...view details