ಗದಗ: ಹುಚ್ಚು ನಾಯಿ ಕಡಿತದಿಂದ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಜಿಲ್ಲೆಯ ನರಗುಂದ ಪಟ್ಟಣದಲ್ಲಿ ನಡೆದಿದೆ.
ಪಟ್ಟಣದ ವಿವಿಧ ಬೀದಿಯಲ್ಲಿ ಹುಚ್ಚು ನಾಯಿ ದಾಳಿ ಮಾಡಿದ್ದು, ಘಟನೆಯಲ್ಲಿ 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ನರಗುಂದ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಹುಚ್ಚುನಾಯಿ ದಾಳಿಯಿಂದ ಗಾಯಗೊಂಡಿರುವ ಮಹಿಳೆ ಓದಿ: ಕರ್ನಾಟಕ ಬಜೆಟ್ 2021-22-ನೂತನ ಜಿಲ್ಲೆ ವಿಜಯನಗರಕ್ಕೆ ವಿಶೇಷ ಆದ್ಯತೆ
ಈಗಾಗಲೇ ನಾಯಿ ಹಾವಳಿಯನ್ನು ನಿಯಂತ್ರಣ ಮಾಡುವಂತೆ ಸ್ಥಳೀಯರು ಹಲವು ಬಾರಿ ಒತ್ತಾಯಿಸಿದ್ದರು. ಆದರೆ, ಪುರಸಭೆ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯದಿಂದ ಇದೀಗ ನಾಯಿಗಳ ಹಾವಳಿ ಹೆಚ್ಚಾಗಿ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದು, ಪುರಸಭೆ ಅಧಿಕಾರಿಗಳಿಗೆ ಜನರು ಛೀಮಾರಿ ಹಾಕಿದ್ದಾರೆ.