ಗದಗ:ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ ತಗುಲಿ ಕ್ಷಣಾರ್ಧದಲ್ಲೆ ಸುಟ್ಟು ಭಸ್ಮವಾದ ಘಟನೆ ಗದಗನಲ್ಲಿ ನಡೆದಿದೆ.
ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ: ಕ್ಷಣಾರ್ಧದಲ್ಲೇ ಸುಟ್ಟು ಭಸ್ಮ..! - ಗದಗ ಚಲಿಸುತ್ತಿದ್ದ ಕಾರಿಗೆ ಬೆಂಕಿ ಸುದ್ದಿ
ನಗರದಲ್ಲಿ ಚಲಿಸುತ್ತಿದ್ದ ಓಮ್ನಿ ಕಾರ್ ಗೆ ಮೊದಲು ಬೆಂಕಿ ಕಾಣಿಸಿಕೊಂಡಿದೆ. ಬಳಿಕ ಕ್ಷಣಾರ್ಧದಲ್ಲೇ ಬೆಂಕಿ ಇಡೀ ಕಾರಿಗೆ ವ್ಯಾಪಿಸಿ ಕಾರ್ ಒಳಗಡೆ ಇದ್ದ ಸಿಲಿಂಡರ್ ಸ್ಫೋಟ ಗೊಂಡಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಹಾನಿಯಾಗಿಲ್ಲ.
ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ
ನಗರದ ಹುಬ್ಬಳ್ಳಿ ರಸ್ತೆಯ ಜಿಲ್ಲಾಡಳಿತದ ಸಮೀಪ ಈ ಘಟನೆ ಸಂಭವಿಸಿದೆ. ಚಲಿಸುತ್ತಿದ್ದ ಓಮ್ನಿ ಕಾರ್ ಗೆ ಮೊದಲು ಬೆಂಕಿ ಕಾಣಿಸಿಕೊಂಡಿದೆ. ಬಳಿಕ ಕ್ಷಣಾರ್ಧದಲ್ಲೇ ಬೆಂಕಿ ಇಡೀ ಕಾರಿಗೆ ವ್ಯಾಪಿಸಿ ಕಾರ್ ಒಳಗಡೆ ಇದ್ದ ಸಿಲಿಂಡರ್ ಸ್ಫೋಟಗೊಂಡಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಹಾನಿಯಾಗಿಲ್ಲ.
ಕೂಡಲೇ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಕಾರಿನಲ್ಲಿದ್ದ ಎಲ್ಲ ವಸ್ತುಗಳು ಸುಟ್ಟು ಭಸ್ಮವಾಗಿವೆ. ಗದಗ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.