ಗದಗ: ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಮುಂಡರಗಿ ಪಟ್ಟಣವನ್ನು ಸ್ಥಳೀಯರು ಸ್ವಯಂ ಪ್ರೇರಿತವಾಗಿ ಬಂದ್ ಮಾಡಲು ನಿರ್ಧರಿಸಿದ್ದಾರೆ.
ಹೆಚ್ಚುತ್ತಿರುವ ಕೋವಿಡ್ ಪ್ರಕರಣ: ಮುಂಡರಗಿ ಪಟ್ಟಣ ಸ್ವಯಂ ಪ್ರೇರಿತ ಬಂದ್ - ಮುಂಡರಗಿ ಪಟ್ಟಣ ಬಂದ್
ಮುಂಡರಗಿ ಪಟ್ಟಣದಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿದೆ. ಹೀಗಾಗಿ ಗ್ರಾಮದ ಹಿರಿಯರು ಹಾಗೂ ವ್ಯಾಪಾರಿಗಳು ಸೇರಿ ಪಟ್ಟಣವನ್ನು ಸ್ವಯಂ ಪ್ರೇರಿತವಾಗಿ ಬಂದ್ ಮಾಡಲು ನಿರ್ಧರಿಸಿದ್ದಾರೆ.
![ಹೆಚ್ಚುತ್ತಿರುವ ಕೋವಿಡ್ ಪ್ರಕರಣ: ಮುಂಡರಗಿ ಪಟ್ಟಣ ಸ್ವಯಂ ಪ್ರೇರಿತ ಬಂದ್ Mundaragi](https://etvbharatimages.akamaized.net/etvbharat/prod-images/768-512-7813650-45-7813650-1593407435243.jpg)
ಜೂ.28ರಂದು ಒಂದೇ ದಿನ 29 ಪಾಸಿಟಿವ್ ಕೇಸ್ಗಳು ಮುಂಡರಗಿ ಪಟ್ಟಣದಲ್ಲಿ ಕಾಣಿಸಿಕೊಂಡಿದ್ದರಿಂದ ಜನರು ಭಯಭೀತರಾಗಿದ್ದಾರೆ. ಈವರೆಗೆ ಸುಮಾರು 42 ಪಾಸಿಟಿವ್ ಪ್ರಕರಣಗಳು ಕಾಣಿಸಿಕೊಂಡಿವೆ. ಹೀಗಾಗಿ ಅಲ್ಲಿನ ಜನ ಸ್ವಯಂ ಪ್ರೇರಣೆಯಿಂದ ಪಟ್ಟಣವನ್ಬ ಬಂದ್ ಮಾಡಿಕೊಳ್ಳಲು ನಿರ್ಧರಿಸಿದ್ದಾರೆ. ಬೆಳಗ್ಗೆ 7 ಗಂಟೆಯಿಂದ 11 ಗಂಟೆಯವರೆಗೆ ಮಾತ್ರ ವ್ಯಾಪಾರ ವಹಿವಾಟು ಮಾಡಲು ಅವಕಾಶಕ್ಕೆ ತೀರ್ಮಾನಿಸಲಾಗಿದೆ. ಪಟ್ಟಣದಲ್ಲಿ ದಿನೇ ದಿನೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿದೆ. ಹೀಗಾಗಿ ಹಿರಿಯರು ಹಾಗೂ ವ್ಯಾಪಾರಸ್ಥರು ಈ ಮಹತ್ವದ ನಿರ್ಧಾರಕ್ಕೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ತಹಶೀಲ್ದಾರ್ ಗಮನಕ್ಕೆ ತಂದು ಇಂದಿನಿಂದ ಬಂದ್ ಮಾಡಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.
ಗ್ರೀನ್ ಝೋನ್ಗೆ ಮರಳಿದ್ದ ಗದಗ ಜಿಲ್ಲೆಯಲ್ಲಿ ಲಾಕ್ ಡೌನ್ ತೆರುವಾದ ಬಳಿಕ ಅಷ್ಟೇನು ಕೊರೊನಾ ಪ್ರಕರಣಗಳು ಕಾಣಿಸಿಕೊಂಡಿರಲಿಲ್ಲ. ಆದರೆ ಕಳೆದ ಒಂದೇ ವಾರದಲ್ಲಿ ಸೋಂಕಿತರ ಸಂಖ್ಯೆ ನೂರರ ಗಡಿ ದಾಟಿದ್ದು, ಸದ್ಯ ಗದಗ ಜಿಲ್ಲೆಯಲ್ಲಿ ಈವರೆಗೆ ಒಟ್ಟು 170 ಕೊರೊನಾ ಕೇಸ್ಗಳು ಪತ್ತೆಯಾಗಿವೆ. ಇದರಲ್ಲಿ ಮುಂಡರಗಿ ತಾಲೂಕಿನಲ್ಲಿಯೇ ಅತೀ ಹೆಚ್ಚು ಸೋಂಕಿತರು ಪತ್ತೆಯಾಗಿದ್ದಾರೆ.