ಗದಗ: ಜಿಲ್ಲೆಯ ಗಜೇಂದ್ರಗಡ ಬಸ್ ನಿಲ್ದಾಣದಲ್ಲಿ ಬಟ್ಟೆಯಲ್ಲಿ ಸುತ್ತಿದ ನವಜಾತ ಶಿಶುವೊಂದು ಪತ್ತೆಯಾಗಿದ್ದು, ಗಂಡು ಮಗುವನ್ನು ಬಿಟ್ಟು ಪಾಪಿಗಳು ನಾಪತ್ತೆಯಾಗಿದ್ದಾರೆ.
ಬಸ್ ನಿಲ್ದಾಣದಲ್ಲಿ ನವಜಾತ ಶಿಶು ಬಿಟ್ಟು ಹೋದ ಪಾಪಿಗಳು; ಗಜೇಂದ್ರಗಡ ಪೊಲೀಸರಿಂದ ರಕ್ಷಣೆ - Gajendragada in Gadag district
ಗದಗ ಜಿಲ್ಲೆಯ ಗಜೇಂದ್ರಗಡ ಬಸ್ ನಿಲ್ದಾಣದಲ್ಲಿ ನವಜಾತ ಗಂಡು ಶಿಶು ಪತ್ತೆಯಾಗಿದ್ದು, ಸ್ಥಳೀಯ ಪೊಲೀಸರು ಮಗುವನ್ನು ರಕ್ಷಿಸಿದ್ದಾರೆ.
ಗಜೇಂದ್ರಗಡ ಬಸ್ ನಿಲ್ದಾಣದಲ್ಲಿ ನವಜಾತ ಶಿಶು ಪತ್ತೆ
ಹಸಿವಿನಿಂದ ಅಳುತ್ತಿದ್ದ ಹಸುಗೂಸನ್ನು ಗಜೇಂದ್ರಗಡ ಪೊಲೀಸರು ರಕ್ಷಿಸಿದ್ದಾರೆ. ತಕ್ಷಣ ಹೆಚ್ಚಿನ ಚಿಕಿತ್ಸೆಗಾಗಿ ಜಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಸದ್ಯ ಮಗು ಆರೋಗ್ಯವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ತಡ ರಾತ್ರಿ ಮಗು ಅಳುವ ಧ್ವನಿ ಕೇಳಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದರು ಎನ್ನಲಾಗಿದೆ. ಮಗುವಿನ ಪೋಷಕರ ಪತ್ತೆಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.