ಗದಗ:ಇಲ್ಲಿವರೆಗೂ ಜಿಲ್ಲೆಯಲ್ಲಿ 234 ಜನರ ಮೇಲೆ ನಿಗಾ ವಹಿಸಲಾಗಿದೆ. ಯಾರಲ್ಲೂ ಕೊರೊನಾ ಪಾಸಿಟಿವ್ ಕಂಡು ಬಂದಿಲ್ಲ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು.
ಗದಗದಲ್ಲಿ 234 ಜನರ ಮೇಲೆ ನಿಗಾ: ಜಿಲ್ಲೆಯಲ್ಲಿ ಒಂದೂ ಕೊರೊನಾ ಪಾಸಿಟಿವ್ ಕೇಸ್ ಇಲ್ಲ! - ಗದಗನಲ್ಲಿ ಕೊರೊನಾ ಸೋಂಕು
ಗದಗ ಜಿಲ್ಲೆಯಲ್ಲಿ ಇದುವರೆಗೂ 234 ಜನರ ಮೇಲೆ ನಿಗಾ ವಹಿಸಲಾಗಿದೆ. 85 ಜನರ ರಕ್ತ ತಪಾಸಣೆ ಮಾಡಲಾಗಿದೆ. ಕೊರೊನಾ ಸೋಂಕಿತ ಪಾಸಿಟಿವ್ ಪ್ರಕರಣ ಒಂದೂ ಕಂಡು ಬಂದಿಲ್ಲ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಸ್ಪಷ್ಟಪಡಿಸಿದರು.
ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ
ಇದರಲ್ಲಿ 28 ದಿನಗಳ ನಿಗಾ ಅವಧಿ ಪೂರೈಸಿದವರು 32 ಜನರು ಇದ್ದಾರೆ. ಮನೆಯಲ್ಲಿಯೇ ಪ್ರತ್ಯೇಕ ನಿಗಾದಲ್ಲಿರುವವರು 195 ಜನರಿದ್ದಾರೆ. ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ 7 ಜನರ ಮೇಲೆ ನಿಗಾ ವಹಿಸಲಾಗಿದೆ.