ಗದಗ:ಗುರುವಾರ ರಾಜ್ಯಾದ್ಯಂತ ನಡೆಯಲಿರುವ 10ನೇ ತರಗತಿ ಪರೀಕ್ಷೆಗೆ ಜಿಲ್ಲೆಯಲ್ಲಿ ಸಕಲ ರೀತಿಯ ಸಿದ್ಧತೆಗಳು ಅಂತಿಮ ಹಂತದಲ್ಲಿವೆ. ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲೂ ಸ್ವಚ್ಛತಾ ಕಾರ್ಯ ಮಾಡಲಾಗುತ್ತಿದೆ.
ಜಿಲ್ಲೆಯ ಒಟ್ಟು 58 ಪರೀಕ್ಷಾ ಕೇಂದ್ರಗಳಲ್ಲಿ ನಂಬರ್ ಹಾಕುವ ಕಾರ್ಯ ಬಹುತೇಕ ಪೂರ್ಣಗೊಂಡಿದೆ. ಈ ಬಾರಿ ಒಟ್ಟು 14,210 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ಇವರಲ್ಲಿ ಕಂಟೇನ್ಮೆಂಟ್ ಪ್ರದೇಶದ 31 ವಿದ್ಯಾರ್ಥಿಗಳೂ ಸೇರಿದ್ದಾರೆ. ಎಲ್ಲಾ ಪರೀಕ್ಷಾ ಕೇಂದ್ರಗಳನ್ನು ಸ್ಯಾನಿಟೈಸ್ ಮಾಡಲಾಗುತ್ತಿದೆ. ಕಂಟೇನ್ಮೆಂಟ್ ಪ್ರದೇಶದ ವಿದ್ಯಾರ್ಥಿಗಳಿಗೆ N95 ಮಾಸ್ಕ್ ವ್ಯವಸ್ಥೆ ಮಾಡಲಾಗಿದ್ದು, ಪ್ರತ್ಯೇಕವಾಗಿ ಪರೀಕ್ಷೆ ಬರೆಯಲು ವ್ಯವಸ್ಥೆ ಕಲ್ಪಿಸಲಾಗಿದೆ.