ಗದಗ: ತೈಲ ಬೆಲೆ ಮತ್ತು ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಓದಿ: ರಾಜ್ಯಕ್ಕೆ ಕೇರಳ - ಮಹಾರಾಷ್ಟ್ರದಿಂದ ಕೋವಿಡ್ ಹಬ್ಬುವ ಆತಂಕ; ಮುನ್ನೆಚ್ಚರಿಕೆ
ಗದಗ: ತೈಲ ಬೆಲೆ ಮತ್ತು ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಓದಿ: ರಾಜ್ಯಕ್ಕೆ ಕೇರಳ - ಮಹಾರಾಷ್ಟ್ರದಿಂದ ಕೋವಿಡ್ ಹಬ್ಬುವ ಆತಂಕ; ಮುನ್ನೆಚ್ಚರಿಕೆ
ಗದಗ ಮಹಾತ್ಮಾಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿರುವ ಮಹಿಳಾ ಕಾಂಗ್ರೆಸ್ ಸದಸ್ಯರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳದಲ್ಲಿ ಕಟ್ಟಿಗೆ ಉರಿಸಿ ಅಡುಗೆ ಮಾಡಿ ಪ್ರತಿಭಟನೆ ಮಾಡಿದರು.
ಗ್ಯಾಸ್ ಸಿಲಿಂಡರ್, ಪಾತ್ರೆಗಳನ್ನು ತಲೆ ಮೇಲೆ ಹೊತ್ತು ಪ್ರತಿಭಟಿಸಿದರು. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರ ಬದುಕು ದುಸ್ತರವಾಗಿದೆ. ಕೇಂದ್ರ ಸರ್ಕಾರ ಡೀಸೆಲ್, ಪೆಟ್ರೋಲ್ ಬೆಲೆ ಏರಿಸುವ ಮೂಲಕ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಕಾರಣವಾಗುತ್ತಿದೆ. ಅಡುಗೆ ಅನಿಲ ಸಿಲಿಂಡರ್ ದರ ಏರಿಕೆ ಮಾಡುತ್ತಿರುವುದು ಖಂಡನೀಯ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಜಗತ್ತಿನಲ್ಲಿ ಪೆಟ್ರೋಲ್, ಡೀಸೆಲ್ ಉತ್ಪನ್ನಗಳಿಗೆ ಅತಿ ಹೆಚ್ಚು ತೆರಿಗೆಯನ್ನು ವಿಧಿಸುತ್ತಿರುವ ದೇಶ ನಮ್ಮ ಭಾರತ ದೇಶವಾಗಿದೆ. ಸಾಮಾನ್ಯ ಜನರ ಜೀವಮಾನದ ಹಣವನ್ನು ಕಾರ್ಪೊರೇಟ್ ಕುಳಗಳಿಗೆ ಧಾರೆಯೆರೆದು ಸರ್ಕಾರದ ದುಡ್ಡು ಸುರಿದು ಸೈ ಎನಿಸಿಕೊಳ್ಳುತ್ತಿದ್ದಾರೆ ಎಂದು ಮಾಜಿ ಜಿಲ್ಲಾ ಪಂಚಾಯತಿ ಉಪಾಧ್ಯಕ್ಷೆ ಶ್ರೀಮತಿ ಶೋಭಾ ಮೇಟಿ ಆರೋಪಿಸಿದರು.
TAGGED:
ಮಹಿಳಾ ಕಾರ್ಯಕರ್ತರ ಪ್ರತಿಭಟನೆ