ಗದಗ:ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸಾವಿಗೀಡಾಗಿ, ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡು ಜೀವನ್ಮರಣದ ಮಧ್ಯೆ ಹೋರಾಡುತ್ತಿದ್ದಾರೆ. ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ಹೊರ ವಲಯದಲ್ಲಿ ಘಟನೆ ನಡೆದಿದೆ.
ಅಪಘಾತದ ರಭಸಕ್ಕೆ ಕಾರು ಮತ್ತು ಬೈಕ್ ಬೆಂಕಿ ಹೊತ್ತಿಕೊಂಡು ಸುಟ್ಟುಹೋಗಿವೆ. ಹುಬ್ಬಳ್ಳಿಯಿಂದ ಕೊಣ್ಣೂರು ಕಡೆಗೆ ಹೊರಟ ಬೈಕ್ ಹಾಗೂ ಬಾಗಲಕೋಟೆಯಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ. ಅಪಘಾತ ಸಂಭವಿಸುತ್ತಿದ್ದಂತೆ ಕಾರಿನಲ್ಲಿದ್ದವರು ಹೊರಗಿಳಿದು ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.