ಕರ್ನಾಟಕ

karnataka

ETV Bharat / state

ಉಕ್ಕಿ ಬಂದ ಮಲಪ್ರಭೆ; ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ, ವಿಡಿಯೋ

ನವಿಲು ತೀರ್ಥ ಡ್ಯಾಂನಿಂದ ಭಾರೀ ಪ್ರಮಾಣದ ನೀರು ಬಿಡುಗಡೆ ಮಾಡಿದ ಹಿನ್ನೆಲೆಯಲ್ಲಿ ಮಲಪ್ರಭಾ ನದಿಯಿಂದ ಅಪಾರ ಪ್ರಮಾಣದ ನೀರು ಹೊರಬಂದಿದೆ. ಹೀಗಾಗಿ ಓರ್ವ ವ್ಯಕ್ತಿ ನೀರಿನಲ್ಲಿ ಕೊಚ್ಚಿ ಹೋಗಿದ್ದಾನೆ. ಮತ್ತೊಂದು ಕಡೆ ಪ್ರವಾಹ ಕಡಿಮೆಯಾಗಲೆಂದು ನದಿಗೆ ಮಹಿಳೆಯೊರ್ವರು ಪೂಜೆ ಸಲ್ಲಿಸಿ ಪ್ರಾರ್ಥಿಸಿಕೊಂಡರು.

ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ

By

Published : Aug 9, 2019, 2:21 PM IST

ಗದಗ: ನವಿಲು ತೀರ್ಥ ಡ್ಯಾಂನಿಂದ ಅಪಾರ ಪ್ರಮಾಣ ನೀರು ಬಿಡುಗಡೆ ಮಾಡಿದ ಕಾರಣ ಉಕ್ಕಿ ಬಂದ ಮಲಪ್ರಭಾ ನದಿಯ ಪ್ರವಾಹಕ್ಕೆ ಓರ್ವ ವ್ಯಕ್ತಿ ಹಾಗೂ ಬೈಕ್​​ ಕೊಚ್ಚಿ ಹೋದ ಘಟನೆ ಜಿಲ್ಲೆಯ ನರಗುಂದ ತಾಲೂಕಿನ ಬೂದಿಹಾಳ ಗ್ರಾಮದಲ್ಲಿ ನಡೆದಿದೆ.

ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ

ಪ್ರವಾಹದಿಂದ ಸಾವಿರಾರು ಎಕರೆ ಜಮೀನು ನಾಶವಾಗಿದ್ದು, ಜನರು ಅತಂತ್ರ ಪರಿಸ್ಥಿತಿಯಲ್ಲಿದ್ದಾರೆ. ನರಗುಂದ ತಾಲೂಕಿನ ಕೊಣ್ಣೂರು ಗ್ರಾಮದಲ್ಲಿ‌ ಹರಿಯುತ್ತಿರೋ ನದಿಗೆ ಮಹಿಳೆಯೋರ್ವರು ಪೂಜೆ ಸಲ್ಲಿಸಿ, ಪ್ರವಾಹ ತಗ್ಗಿಸು ಎಂದು ಬೇಡಿಕೊಂಡಿದ್ದಾರೆ.

ಗದಗ ತಾಲೂಕಿನ ಸೊರಟೂರು ಗ್ರಾಮದಲ್ಲಿ ಮನೆ ಕುಸಿದು ಎತ್ತು ಸಾವನ್ನಪ್ಪಿದೆ. ಪ್ರಾಣಾಪಾಯದಿಂದ ಕುಟುಂಬ ಸದಸ್ಯರು ಪಾರಾಗಿದ್ದಾರೆ. ಯಲ್ಲಪ್ಪ ಗುಬ್ಬಿ ಎಂಬವರ ಮನೆ ಕುಸಿದಿದೆ. ಈ ಘಟನೆ ಮುಳಗುಂದ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಗದಗ ತಾಲೂಕಿನ ಹಂಗನಕಟ್ಟಿ ಗ್ರಾಮದಲ್ಲಿ ಗುರುವಾರ ರಾತ್ರಿ ಮನೆ ಗೋಡೆ ಕುಸಿದು ತಾಯಿ, ಮಗನಿಗೆ ಗಂಭೀರ ಗಾಯಗಳಾಗಿದ್ದು, ಶಿರಹಟ್ಟಿ ಪಟ್ಟಣದ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕುಸಮವ್ವ, ನಾಗಪ್ಪ ಖಾನಾಪೂರ ಮತ್ತು ರಜನೇಶ ನಾಗಪ್ಪ ಖಾನಾಪೂರ ಎಂಬುವವರು ಗಾಯಗೊಂಡಿದ್ದಾರೆ.

ಗದಗ ಜಿಲ್ಲೆಯ ರೋಣ ತಾಲೂಕಿನ ಹೊಳೆಆಲೂರ ಗ್ರಾಮದಲ್ಲಿ ಸಿಲುಕಿಕೊಂಡ 20ಕ್ಕೂ ಹೆಚ್ಚು ಜನರನ್ನು ಹೆಲಿಕಾಪ್ಟರ್​ ಮೂಲಕ ರಕ್ಷಣೆ ಮಾಡಲು ನಿರ್ಧರಿಸಲಾಗಿದೆ ಎಂದು ಗದಗ ಜಿಲ್ಲಾಧಿಕಾರಿ ಎಮ್. ಜಿ. ಹಿರೇಮಠ ಹೇಳಿದ್ದಾರೆ. ರೋಣ ತಾಲೂಕಿನ ಹೊಳೆಆಲೂರ ಗ್ರಾಮ ನೀರಿನಲ್ಲಿ ಕೊಚ್ಚಿ ಹೋಗಿದ್ದು, ಸಂತ್ರಸ್ತರಿಗೆ ಉಪಹಾರ, ಕುಡಿಯಲು ನೀರು ಕೊಡದ ಜಿಲ್ಲಾಡಳಿತ ವಿರುದ್ಧ ಜನರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ABOUT THE AUTHOR

...view details