ಬೆಂಗಳೂರು: ಗದಗ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಸ್ಟೆನೋಗ್ರಾಫರ್, ಜವಾನ, ಟೈಪಿಸ್ಟ್ ಸೇರಿದಂತೆ ಒಟ್ಟು 18 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಸೂಕ್ತ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆ ವಿವರ:ಗದಗ ಜಿಲ್ಲಾ ನ್ಯಾಯಾಲಯದಿಂದ ಅರ್ಜಿ ಆಹ್ವಾನಿಸಲಾದ ಹುದ್ದೆಗಳ ವಿವರ ಇಂತಿದೆ.
- ಶೀಘ್ರ ಲಿಪಿಗಾರ 2
- ಟೈಪಿಸ್ಟ್ 3
- ಟೈಪಿಸ್ಟ್- ಕಾಪಿಸ್ಟ್ 3
- ಜವಾನ 10
ವಿದ್ಯಾರ್ಹತೆ:
- ಶೀಘ್ರ ಲಿಪಿಗಾರ / ಬೆರಳಚ್ಚುಗಾರ : ಪಿಯುಸಿ ಅಥವಾ ಕಮರ್ಷಿಯಲ್ ಪ್ರಾಕ್ಟಿಸ್ನಲ್ಲಿ 3 ವರ್ಷದ ಡಿಪ್ಲೊಮಾ ಪದವಿಯನ್ನು ಹೊಂದಿರಬೇಕು. ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸುವ ಕನ್ನಡ ಮತ್ತು ಇಂಗ್ಲಿಷ್ ಭಾಷೆಯ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು
- ಟೆಪಿಸ್ಟ್- ಕಾಪಿಸ್ಟ್: ಪಿಯುಸಿ ಅಥವಾ ಕಮರ್ಷಿಯಲ್ ಪ್ರಾಕ್ಟಿಸ್ನಲ್ಲಿ 3 ವರ್ಷದ ಡಿಪ್ಲೊಮಾ ಪದವಿಯನ್ನು ಹೊಂದಿರಬೇಕು. ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸುವ ಕಿರಿಯ ಕನ್ನಡ ಮತ್ತು ಇಂಗ್ಲಿಷ್ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರರ್ಣರಾಗಿರಬೇಕು.
- ಜವಾನ:10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.
ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ವರ್ಷ ಆಗಿದ್ದು, ಗರಿಷ್ಠ ವಯೋಮಿತಿ 35 ವರ್ಷ ಆಗಿದೆ. ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.