ಗದಗ:ಲಾಕ್ಡೌನ್ ಹಿನ್ನೆಲೆ ಕೇಂದ್ರ ಸರ್ಕಾರ ಕೂಲಿ ಕಾರ್ಮಿಕರಿಗಾಗಿ ನರೇಗಾ ಯೋಜನೆಯಡಿ ವಿಶೇಷ ಅನುದಾನ ಘೋಷಣೆ ಮಾಡಿದೆ. ಆದರೂ ಗ್ರಾಮೀಣ ಪ್ರದೇಶದಲ್ಲಿ ಕೂಲಿ ಕೆಲಸಕ್ಕಾಗಿ ಜನ ಪರದಾಡ್ತಿದ್ದಾರೆ.
ಹೊಟ್ಟೆಗೆ ಏನು ತಿನ್ನೋಣ? ಕೆಲಸ ಕೊಡಿ ಅಂತ ಗ್ರಾಪಂ ಎದುರು ಗ್ರಾಮಸ್ಥರ ಪ್ರತಿಭಟನೆ - ಗ್ರಾಮ ಪಂಚಾಯ್ತಿ ಎದುರು ಗ್ರಾಮಸ್ಥರ ಪ್ರತಿಭಟನೆ ಸುದ್ದಿ
ನರೇಗಾ ಯೋಜನೆಯಡಿ ಕೆಲಸ ನೀಡುವಂತೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ರಾಮಗೇರಿ ಗ್ರಾಮದ ಜನರು ಗ್ರಾಮ ಪಂಚಾಯ್ತಿ ಎದುರು ಪ್ರತಿಭಟನೆ ಮಾಡಿದ್ದಾರೆ.
ಗ್ರಾಮಸ್ಥರ ಪ್ರತಿಭಟನೆ
ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ರಾಮಗೇರಿ ಗ್ರಾಮದಲ್ಲಿ ನರೇಗಾ ಯೋಜನೆ ಅಡಿಯಲ್ಲಿ ಕೆಲಸ ನೀಡುವಂತೆ ಗ್ರಾಮಸ್ಥರು ಗ್ರಾಮ ಪಂಚಾಯ್ತಿ ಮುಂದೆ ದಿಢೀರ್ ಪ್ರತಿಭಟನೆಗಿಳಿದಿದ್ದಾರೆ. ಗ್ರಾಮ ಪಂಚಾಯ್ತಿ ಕಚೇರಿಗೆ ಮುತ್ತಿಗೆ ಹಾಕಿ ಪಿಡಿಒ ಅವರನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.
ಲಾಕ್ಡೌನ್ ಸಮಯದಲ್ಲಿ ಕೆಲಸ ಇಲ್ಲದೆ ಕುಟುಂಬ ನಿರ್ವಹಣೆ ಕಷ್ಟವಾಗ್ತಿದೆ. ಹೀಗಾಗಿ ಕೆಲಸ ನೀಡಿ ಎಂದು ಪಟ್ಟು ಹಿಡಿದಿದ್ದಾರೆ. ಗ್ರಾಮ ಪಂಚಾಯ್ತಿ ಮುಂದೆ ಜಮಾವಣೆಗೊಂಡ ಕಾರ್ಮಿಕರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.