ಗದಗ:ರಾಜ್ಯದ ಬಹುತೇಕ ಜಿಲ್ಲೆಗಳು ಕೊರೊನಾ ಮುಕ್ತವಾಗಿದ್ದವು. ಆದರೆ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಎಲ್ಲಾ ಜಿಲ್ಲೆಗಳಿಗೂ ವ್ಯಾಪಿಸುತ್ತಾ ಬರುತ್ತಿದೆ. ನಿನ್ನೆ ಮಂಡ್ಯದಲ್ಲಿ ಮೊದಲ ಬಾರಿ 3 ಪ್ರಕರಣಗಳು ಪತ್ತೆಯಾಗಿದ್ದು ಗದಗದಲ್ಲಿ ಒಂದು ಪ್ರಕರಣ ಪತ್ತೆಯಾಗಿದೆ.
ಅಂಚೆ ಕಚೇರಿ ಮುಂದೆ ಗುಂಪು ಗುಂಪಾಗಿ ಸೇರಿ ಬೇಜವಾಬ್ದಾರಿ ಪ್ರದರ್ಶಿಸಿದ ಜನರು - ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಜನರ ಬೇಜವಾಬ್ದಾರಿ
ದಿನದಿಂದ ದಿನಕ್ಕೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಕೊರೊನಾ ವೈರಸ್ ಹರಡುತ್ತಿದ್ದರೂ ಜನರು ಮಾತ್ರ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ, ಗುಂಪು ಗುಂಪಾಗಿ ಸೇರುವ ಮೂಲಕ ಬೇಜಾಬ್ದಾರಿ ಪ್ರದರ್ಶಿಸಿದ್ಧಾರೆ
ಬೇಜವಾಬ್ದಾರಿ ಪ್ರದರ್ಶಿಸಿದ ಜನರು
ತಮ್ಮ ಜಿಲ್ಲೆಗಳಲ್ಲಿ ಕೊರೊನಾ ಪ್ರಕರಣ ಕೇಸ್ಗಳು ಪತ್ತೆಯಾಗಿದ್ದರೂ ಜನರಿಗೆ ಮಾತ್ರ ಬುದ್ಧಿ ಬಂದಿಲ್ಲ. ತಮಗೂ ಇದಕ್ಕೂ ಯಾವುದೇ ಸಂಬಂಧ ಇಲ್ಲ ಎನ್ನುವಂತೆ ಗುಂಪು ಗುಂಪಾಗಿ ಸೇರುತ್ತಿದ್ದಾರೆ. ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ವೈರಸ್ ಹರಡಲು ಕಾರಣರಾಗುತ್ತಿದ್ದಾರೆ. ಗದಗ ಜಿಲ್ಲೆ ಬೆಟಗೇರಿಯ ಮಲ್ಲಿಕಾರ್ಜುನ ನಗರದಲ್ಲಿರುವ ಅಂಚೆ ಕಚೇರಿ ಮುಂದೆ ವಿಧವಾ ವೇತನ, ವೃದ್ಧಾಪ್ಯ ವೇತನಕ್ಕಾಗಿ ಜನರು ಕ್ಯೂ ನಿಂತಿದ್ದಾರೆ. ಸುಮಾರು 200 ಮೀಟರ್ವರೆಗೂ ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಗುಂಪಾಗಿ ನಿಂತು ಬೇಜಾವಾಬ್ದಾರಿ ಪ್ರದರ್ಶಿಸಿದ್ದಾರೆ.