ಕರ್ನಾಟಕ

karnataka

ETV Bharat / state

ಗ್ರಾಮಕ್ಕೆ ಎಂಟ್ರಿ ಕೊಟ್ಟ ಕೊರೊನಾ : ಮನೆ ತೊರೆದು ಜಮೀನಿನಲ್ಲಿ ವಾಸ್ತವ್ಯ ಹೂಡಿದ ಜನ - People who left home and lived on a farm in Gadag

ಗದಗ ಜಿಲ್ಲೆಯ ಶೀತಾಲಹರಿ ಗ್ರಾಮದ ಹತ್ತಾರು ಕುಟುಂಬಗಳು ಈಗಾಗಲೇ ಮನೆಗಳನ್ನು ತೊರೆದಿದ್ದು, ಜಮೀನಿನಲ್ಲಿ ಗುಡಿಸಲು ಹಾಕಿಕೊಂಡು ವಾಸ ಮಾಡುತ್ತಿದ್ದಾರೆ.

villagers left the house in Gadag
ಮನೆ ತೊರೆದು ಜಮೀನಿನಲ್ಲಿ ವಾಸ್ತವ್ಯ ಹೂಡಿದ ಜನ

By

Published : Jul 17, 2020, 2:28 PM IST

ಗದಗ :ಜಿಲ್ಲೆಯಲ್ಲಿದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಆತಂಕಗೊಂಡಿರುವ ಜನರು ತಮ್ಮ ಮನೆಗಳನ್ನು ತೊರೆದು ಜಮೀನಿನಲ್ಲಿ ವಾಸ ಮಾಡಲು ಮುಂದಾಗಿದ್ದಾರೆ.

ಜಿಲ್ಲೆಯ ಶೀತಾಲಹರಿ ಗ್ರಾಮದ ಹತ್ತಾರು ಕುಟುಂಬಗಳು ಈಗಾಗಲೇ ಮನೆಗಳನ್ನು ತೊರೆದಿದ್ದು, ಜಮೀನಿನಲ್ಲಿ ಗುಡಿಸಲು ಹಾಕಿಕೊಂಡು ವಾಸ ಮಾಡುತ್ತಿದ್ದಾರೆ.

ಕೊರೊನಾ ಭೀತಿಯಿಂದ ಜಮೀನಿನಲ್ಲಿ ವಾಸ್ತವ್ಯ ಹೂಡಿದ ಜನ

ಕಳೆದ 15 ದಿನಗಳಲ್ಲಿ ಜಿಲ್ಲೆಯಲ್ಲಿ 300 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಸದ್ಯ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 414 ಕ್ಕೆ ಏರಿಕೆಯಾಗಿದೆ. ನಗರ ಪ್ರದೇಶ ಮಾತ್ರವಲ್ಲದೇ ಗ್ರಾಮೀಣ ಭಾಗದಲ್ಲೂ ಕೊರೊನಾ ಹಾವಳಿ ಹೆಚ್ಚಾಗುತ್ತಿದೆ.

ABOUT THE AUTHOR

...view details