ಕರ್ನಾಟಕ

karnataka

ETV Bharat / state

ಸಾರ್ವಜನಿಕರು ಕೊರೊನಾ ನಿಯಮ ಪಾಲಿಸಿ : ಸಚಿವ ಸಿ ಸಿ ಪಾಟೀಲ್​ ಮನವಿ - minister cc patil

ಸಾಧ್ಯವಾದಷ್ಟು ಮನೆಯಿಂದ ಹೊರಗೆ ಬರಬೇಡಿ ಎಂದು ಸಚಿವ ಸಿ ಸಿ ಪಾಟೀಲ್ ಸಾರ್ವಜನಿಕರಿಗೆ ಮನವಿ ಮಾಡಿಕೊಂಡರು. ಜಿಲ್ಲೆಯಲ್ಲಿ ನಿತ್ಯ 18 ರಿಂದ 20 ಕೇಸ್ ಬರುತ್ತಿವೆ. ಇದು ಹೀಗೆ ಮುಂದುವರಿದರೆ ಕೈಮೀರುವ ಸಾಧ್ಯತೆ ಇದೆ. ಜನರು ಅರಿತು ಸುರಕ್ಷಿತವಾಗಿರಿ..

minister cc patil
ಸಚಿವ ಸಿ.ಸಿ ಪಾಟೀಲ್​

By

Published : Apr 5, 2021, 8:22 PM IST

ಗದಗ :ಕೊರೊನಾ 2ನೇ ಅಲೆ ವೇಗವಾಗಿ ಹರಡುತ್ತಿದೆ. ಸಾರ್ವಜನಿಕರು ಕೊರೊನಾ ನಿಯಮಗಳನ್ನು ಪಾಲಿಸಿ ಸರ್ಕಾರದ ಜೊತೆ ಕೈಜೋಡಿಸಿ ಎಂದು ಸಚಿವ ಸಿ ಸಿ ಪಾಟೀಲ್ ಜನತೆಗೆ ಮನವಿ ಮಾಡಿದ್ದಾರೆ.

ಕೊರೊನಾ ನಿಯಮಗಳನ್ನ ಪಾಲಿಸುವಂತೆ ಮನವಿ ಮಾಡಿದ ಸಚಿವ ಸಿ ಸಿ ಪಾಟೀಲ್..​

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಭಯಪಡದೆ ವ್ಯಾಕ್ಸಿನ್​ ಹಾಕಿಸಿಕೊಳ್ಳಿ. ಮದುವೆ ಹಾಗೂ ಶುಭ ಸಮಾರಂಭಗಳಲ್ಲಿ ಜನ ನಿಯಂತ್ರಣದ ಬಗ್ಗೆ ಕಠಿಣ ಕ್ರಮ ಜರುಗಿಸಲಾಗುವುದು. ಜಾತ್ರೆ ಸೇರಿದಂತೆ ಧಾರ್ಮಿಕ ಕಾರ್ಯಕ್ರಮಗಳನ್ನು ಮುಂದೂಡಿ. ಜನರು ಜವಾಬ್ದಾರಿಯಿಂದ ವರ್ತಿಸಬೇಕು, ಕುಟುಂಬದ ಸುರಕ್ಷತೆ ಕಾಪಾಡಿಕೊಳ್ಳಿ.

ಸಾಧ್ಯವಾದಷ್ಟು ಮನೆಯಿಂದ ಹೊರಗೆ ಬರಬೇಡಿ ಎಂದು ಸಚಿವ ಸಿ ಸಿ ಪಾಟೀಲ್ ಸಾರ್ವಜನಿಕರಿಗೆ ಮನವಿ ಮಾಡಿಕೊಂಡರು. ಜಿಲ್ಲೆಯಲ್ಲಿ ನಿತ್ಯ 18 ರಿಂದ 20 ಕೇಸ್ ಬರುತ್ತಿವೆ. ಇದು ಹೀಗೆ ಮುಂದುವರಿದರೆ ಕೈಮೀರುವ ಸಾಧ್ಯತೆ ಇದೆ. ಜನರು ಅರಿತು ಸುರಕ್ಷಿತವಾಗಿರಿ ಎಂದು ಕರೆ ನೀಡಿದ್ದಾರೆ.

ABOUT THE AUTHOR

...view details