ಗದಗ : ರಾಜ್ಯದಲ್ಲಿ ಕೊರೊನಾ ವೈರಸ್ ಹಾವಳಿಯನ್ನು ತಡೆಗಟ್ಟಲು ಹಗಲಿರುಳು ಶ್ರಮಿಸುತ್ತಿರುವ ಪೊಲೀಸ್ ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿಗೆ ನಗರದಲ್ಲಿ ಆರತಿ ಬೆಳಗಿ ಗೌರವ ಸಲ್ಲಿಸಲಾಯಿತು.
ಕೊರೊನಾ ವಾರಿಯರ್ಸ್ ಗೆ ಆರತಿ ಬೆಳಗಿ ಗೌರವ ಸಮರ್ಪಣೆ - ಮೆಣಸಗಿ ಪೊಲೀಸ್ ವೈದ್ಯರಿಗೆ ಆರತಿ
ತಮ್ಮ ಜೀವದ ಹಂಗು ತೊರೆದು ಜನರನ್ನು ಮಹಾಮಾರಿ ಕೋವಿಡ್ -19 ಸೋಂಕಿನಿಂದ ರಕ್ಷಿಸುತ್ತಿರುವ ಪೊಲೀಸ್ ಮತ್ತು ವೈದ್ಯರಿಗೆ ಹಾಗೂ ಆಶಾ ಕಾರ್ಯಕರ್ತೆಯರಿಗೆ ಗದಗ ಜಿಲ್ಲೆಯ ರೋಣ ತಾಲೂಕಿನ ಮೆಣಸಗಿ ಗ್ರಾಮದಲ್ಲಿ ಆರತಿ ಬೆಳಗಿ ಗೌರವ ಸಮರ್ಪಿಸಲಾಯಿತು.
ಅಕ್ಕಮಹಾದೇವಿ ಮಹಿಳಾ ಮಂಡಳಿ
ಜಿಲ್ಲೆಯ ರೋಣ ತಾಲೂಕಿನ ಮೆಣಸಗಿ ಗ್ರಾಮದ ಅಕ್ಕಮಹಾದೇವಿ ಮಹಿಳಾ ಮಂಡಳಿ ಹಾಗೂ ನಿವೃತ್ತ ಎಸ್ಪಿ ಬಿ. ಆರ್. ಹಿರೇಗೌಡ್ರ ನೇತೃತ್ವದಲ್ಲಿ ಪೊಲೀಸ್, ವೈದ್ಯಕೀಯ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರಿಗೆ ಆರತಿ ಬೆಳಗಿ ಗೌರವ ಸಲ್ಲಿಸಲಾಯಿತು.
ಇದೇ ವೇಳೆ ಮಾತನಾಡಿದ ಬಿ. ಆರ್. ಹಿರೇಗೌಡರು ಕೊರೊನಾ ವೈರಸ್ ತಡೆಗಟ್ಟುವಲ್ಲಿ ಪೊಲೀಸ್ ಸಿಬ್ಬಂದಿ ಪಾತ್ರ ಶ್ಲಾಘನೀಯವಾದದ್ದು. ತಮ್ಮ ಜೀವದ ಹಂಗು ತೊರೆದು ಜನರ ರಕ್ಷಣೆಗೆ ಪೊಲೀಸರು ನಿಂತಿದ್ದಾರೆ. ಹಾಗಾಗಿ ಅವರ ಕಾರ್ಯಕ್ಕೆ ನಾವು ಸಹಕಾರ ಕೊಡಬೇಕು ಎಂದು ಹೇಳಿ ಅವರ ಕಾರ್ಯವನ್ನು ಶ್ಲಾಘಿಸಿದರು.