ಗದಗ: ಕಳೆದ ಹದಿನಾರು ವರ್ಷಗಳಿಂದ ಬಿಎಸ್ಎಫ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದ ಗದಗ ನಗರದ ಇರಾನಿ ಕಾಲೋನಿ ಮೂಲದ ಯೋಧ ಕುಮಾರಸ್ವಾಮಿ ನಾಗರಾಳ(36) ಆಯತಪ್ಪಿ ಬಿದ್ದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಮೃತ ಯೋಧನ ಅಂತಿಮ ಸಂಸ್ಕಾರಕ್ಕೆ ಸಕಲ ಸಿದ್ದತೆ..
ಆಯತಪ್ಪಿ ಬಿದ್ದು ತಲೆಗೆ ತೀವ್ರ ಪೆಟ್ಟು ಬಿದ್ದು ಸಾವನ್ನಪ್ಪಿದ ಗದಗ ಯೋಧ ಕುಮಾರಸ್ವಾಮಿ ನಾಗರಾಳ ಅವರ ಪಾರ್ಥಿವ ಶರೀರ ಸ್ವಗ್ರಾಮಕ್ಕೆ ಆಗಮಿಸಿದ್ದು, ಅಂತ್ಯ ಸಂಸ್ಕಾರಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.
ಇಂದು ಗದಗ ನಗರಕ್ಕೆ ಯೋಧನ ಪಾರ್ಥಿವ ಶರೀರ ಆಗಮಿಸಿದೆ. ಗದಗನ ಇರಾನಿ ಕಾಲೋನಿಯ ಯೋಧನ ಮನೆಗೆ ಪಾರ್ಥಿವ ಶರೀರ ಆಗಮಿಸುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಯೋಧ ಕುಮಾರಸ್ವಾಮಿ ಕಳೆದ 16 ವರ್ಷಗಳಿಂದ ಬಿಎಸ್ಎಫ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಕೋಲ್ಕತ್ತಾದಲ್ಲಿ ಹೆಡ್ ಕಾನ್ಸ್‌ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಸೋಮವಾರವಷ್ಟೇ ತಲೆಗೆ ಪೆಟ್ಟು ಬಿದ್ದು ಗಾಯಗೊಂಡಿದ್ದ ಯೋಧನನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೋಲ್ಕತಾ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಜುಲೈ 19ರಂದು ನಿಧನವಾಗಿದ್ದಾರೆ.ಇಂದು ಸಾಯಿಮಂದಿರ ಹತ್ತಿರದ ಆವರಣದಲ್ಲಿ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗಿದ್ದು, ಜಿಲ್ಲಾಡಳಿತ ಅಂತ್ಯಸಂಸ್ಕಾರಕ್ಕೆ ಸಕಲ ಸಿದ್ಧತೆ ನಡೆಸಿದೆ.