ಗದಗ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಎಲ್ಲಾ ವರ್ಗಗಳ ಆರ್ಥಿಕ ಅಭಿವೃದ್ಧಿಗೆ ಘೋಷಿಸಿದ 20 ಲಕ್ಷ ಕೋಟಿಯ ವಿಶೇಷ ಪ್ಯಾಕೇಜ್ ಸಕಾಲಿಕ ಹಾಗೂ ಸ್ವಾಗತಾರ್ಹ ನಿರ್ಧಾರವಾಗಿದೆ ಎಂದು ರಾಜ್ಯದ ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವ ಸಿ.ಸಿ.ಪಾಟೀಲ ತಿಳಿಸಿದ್ದಾರೆ.
''ದೇಶದ ಈಗಿನ ಪರಿಸ್ಥಿತಿಯಲ್ಲಿ ಪ್ರಧಾನಿಗಳ ವಿಶೇಷ ಆರ್ಥಿಕ ಪ್ಯಾಕೇಜ್ ಸ್ವಾಗತಾರ್ಹ''
ಪ್ರಧಾನಿ ನರೇಂದ್ರ ಮೋದಿಯವರು ಇಂದು ಎಲ್ಲಾ ವರ್ಗಗಳ ಆರ್ಥಿಕ ಅಭಿವೃದ್ಧಿಗೆ ಘೋಷಿಸಿದ 20 ಲಕ್ಷ ಕೋಟಿಯ ವಿಶೇಷ ಪ್ಯಾಕೇಜ್ ಸಕಾಲಿಕ ಹಾಗೂ ಸ್ವಾಗತಾರ್ಹ ನಿರ್ಧಾರವಾಗಿದೆ ಎಂದು ರಾಜ್ಯದ ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವ ಸಿ.ಸಿ.ಪಾಟೀಲ ತಿಳಿಸಿದ್ದಾರೆ.
ದೇಶದ ಅಸಮಾನ್ಯ ಪರಿಸ್ಥಿತಿಯಲ್ಲಿ ಪ್ರಧಾನಿಗಳ ವಿಶೇಷ ಆರ್ಥಿಕ ಪ್ಯಾಕೇಜ್ ಸ್ವಾಗತಾರ್ಹ: ಸಿ.ಸಿ.ಪಾಟೀಲ...
ಇದೊಂದು ಐತಿಹಾಸಿಕ ನಿರ್ಧಾರವಾಗಲಿದ್ದು, ಭಾರತದ ಆರ್ಥಿಕ ವ್ಯವಸ್ಥೆಯ ಮಹತ್ವದ ಅಂಗಗಳಾದ ಸಣ್ಣ ಕೈಗಾರಿಕೆ, ಕೃಷಿ, ತೆರಿಗೆದಾರ ಮಧ್ಯಮ ವರ್ಗದ ಜನರ ಆರ್ಥಿಕತೆಯನ್ನು ಮತ್ತೆ ಸರಿ ದಾರಿಗೆ ತರಲು ಇದೊಂದು ಅತ್ಯುತ್ತಮ ಹೆಜ್ಜೆಯಾಗಿದೆ. ಪ್ರಧಾನಿಗಳ ಸಬ್ ಕಾ ಸಾಥ್, ಸಬ್ ವಿಕಾಸ್ ಘೋಷಣೆ ಈ ನಿರ್ಧಾರದಲ್ಲಿ ಅನಾವರಣಗೊಂಡಿದೆ ಎಂದು ಸಚಿವ ಸಿ.ಸಿ.ಪಾಟೀಲ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.