ಹುಬ್ಬಳ್ಳಿ: ಉತ್ತರ ಪ್ರದೇಶದ ಹಥ್ರಾಸ್ ಜಿಲ್ಲೆಯಲ್ಲಿ ದಲಿತ ಯುವತಿ ಮೇಲೆ ನಡೆದ ಅತ್ಯಾಚಾರ ಖಂಡಿಸಿ ನಗರದ ತಹಶೀಲ್ದಾರ್ ಕಚೇರಿ ಎದುರುಗಡೆ ಅಖಿಲ ಭಾರತ ಡಾ. ಬಿ ಆರ್ ಅಂಬೇಡ್ಕರ್ ಸೈನ್ಯದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಹಥ್ರಾಸ್ ಅತ್ಯಾಚಾರಕ್ಕೆ ಖಂಡನೆ: ಅಖಿಲ ಭಾರತ ಡಾ. ಬಿ ಆರ್ ಅಂಬೇಡ್ಕರ್ ಸೈನ್ಯ ಪ್ರತಿಭಟನೆ - hathras rape case
ಹಥ್ರಾಸ್ನ ದಲಿತ ಯುವತಿ ಮೇಲಿನ ಅತ್ಯಾಚಾರ,ಹಲ್ಲೆ ಖಂಡಿಸಿ ಅಖಿಲ ಭಾರತ ಡಾ. ಬಿ ಆರ್ ಅಂಬೇಡ್ಕರ್ ಸೈನ್ಯದ ಕಾರ್ಯಕರ್ತರು ಪ್ರತಿಭಟಿಸಿದ್ದಾರೆ.
ನಗರದ ಅಂಬೇಡ್ಕರ್ ವೃತ್ತದಿಂದ ರ್ಯಾಲಿ ಮುಖಾಂತರ ಪ್ರತಿಭಟನೆ ನಡೆಸಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅತ್ಯಾಚಾರಿಗಳಿಗೆ ತಕ್ಷಣವೇ ಗಲ್ಲು ಶಿಕ್ಷೆ ನೀಡಬೇಕು ಮತ್ತು ಉತ್ತರ ಪ್ರದೇಶದಲ್ಲಿ ಅತ್ಯಾಚಾರ ತಡೆಗಟ್ಟಲು ವಿಫಲವಾದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಕೂಡಲೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ತಹಶೀಲ್ದಾರರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.
ದಲಿತ ಯುವತಿಯ ಸಾಮೂಹಿಕ ಅತ್ಯಾಚಾರಕ್ಕೆ ಗದಗದಲ್ಲೂ ಖಂಡನೆ: ನಗರದ ಹುಯಿಲಗೋಳ ನಾರಾಯಣರಾವ್ ವೃತ್ತದಿಂದ ಮಹಾತ್ಮಾ ಗಾಂಧಿ ವೃತ್ತದ ವರೆಗೆ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿದ ಜೈಭೀಮ್, ಡಿ.ಎಸ್.ಎಸ್, ಸಿಐಟಿಯು, ಜಯ ಕರ್ನಾಟಕ ಹಾಗೂ ಮುಸ್ಲಿಂ ಸಂಘಟನೆಗಳ ಕಾರ್ಯಕರ್ತರು ತಮಟೆ ಬಾರಿಸುವ ಮೂಲಕ ಉತ್ತರ ಪ್ರದೇಶ ಸಿ.ಎಂ ಯೋಗಿ ಆದಿತ್ಯನಾಥರ ಶವಯಾತ್ರೆ ನಡೆಸಿದರು. ಮಹಾತ್ಮಾ ಗಾಂಧಿ ವೃತ್ತದಲ್ಲಿ ರಸ್ತೆ ತಡೆ ಮಾಡಿ ಬಿಜೆಪಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.