ಗದಗ: ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಪ್ರತಿಷ್ಠಾಪನೆ ವಿವಾದಕ್ಕೆ ಸಂಬಂಧಿಸಿದಂತೆ ಕರವೇ ಕಾರ್ಯಕರ್ತರ ಮೇಲೆ ದಾಖಲಿಸಲಾಗಿರುವ ಕೇಸ್ ಹಿಂಪಡೆಯಬೇಕೆಂದು ಆಗ್ರಹಿಸಿ ಜಿಲ್ಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ನಾರಾಯಣಗೌಡ ಬಣದ ಕರವೇ ರಾಜ್ಯ ಉಪಾಧ್ಯಕ್ಷ ಎಸ್.ಹೆಚ್. ಸೋಂಪುರ ನೇತೃತ್ವದಲ್ಲಿ ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ಮಾಡಲಾಯಿತು. ಈ ವೇಳೆ ಎಮ್.ಇ.ಎಸ್ ವಿರುದ್ಧ ಘೋಷಣೆ ಕೂಗಿ, ಪ್ರತಿಕೃತಿ ದಹನ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಲಾಯಿತು.