ಗದಗ: ಮುಂಡರಗಿ ಪೊಲೀಸ್ ಠಾಣೆಗೆ ಭೇಟಿ ಕೊಟ್ಟಿದ್ದ ವ್ಯಕ್ತಿಗೆ ಕೊರೊನಾ ಸೋಂಕು ಕಾಣಿಸಿದ ಕಾರಣ ಗದಗದ ಎಲ್ಲಾ ಪೊಲೀಸ್ ಠಾಣೆಗಳಿಗೆ ತಾತ್ಕಾಲಿಕವಾಗಿ ಸಾರ್ವಜನಿಕರ ಪ್ರವೇಶ ನಿಷೇಧ ಹೇರಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಎನ್.ಸತೀಶ್ ತಿಳಿಸಿದರು.
ಗದಗದಲ್ಲಿ ಪೊಲೀಸ್ ಠಾಣೆಗಳಿಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ - ಗದಗದಲ್ಲಿ ಠಾಣೆಗಳಿಗೆ ಸಾರ್ವಜನಿಕರ ಪ್ರವೇಶ ನಿಷೇಧ
ಮುಂಡರಗಿ ಠಾಣೆಗೆ ಭೇಟಿ ನೀಡಿದ್ದ ವ್ಯಕ್ತಿಗೆ ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ಎಲ್ಲಾ ಠಾಣೆಗಳಿಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
ಎಸ್ಪಿ ಸತೀಶ್
ಖಾಸಗಿ ಕೆಲಸದ ನಿಮಿತ್ತ ಕೊಡಗಿನ ಶನಿವಾರಸಂತೆಯಿಂದ ಮುಂಡರಗಿ ಠಾಣೆಗೆ ರೋಗಿ ಸಂಖ್ಯೆ-9215 ಭೇಟಿ ನೀಡಿದ್ದರು.
ಪ್ರಮುಖ ಪ್ರಕರಣಗಳಿಗೆ ಸಂಬಂಧಿಸಿದಂತೆ ಸ್ಯಾನಿಟೈಸರ್ ಮಾಡಿ, ಮಾಸ್ಕ್ ಹಾಕಿಸಿ ಎಲ್ಲಾ ಮುಂಜಾಗ್ರತೆ ಕ್ರಮಗಳನ್ನು ಕೈಗೊಂಡು ಠಾಣೆಯ ಒಳಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ಸೋಂಕಿತನೊಂದಿಗೆ ಸಂಪರ್ಕದಲ್ಲಿದ್ದ ಸಿಬ್ಬಂದಿಯ ಸ್ವ್ಯಾಬ್ ಅನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಜೊತೆಗೆ, ಠಾಣೆಯನ್ನು ಎರಡು ಬಾರಿ ಸ್ಯಾನಿಟೈಸ್ ಮಾಡಲಾಗಿದೆ ಎಂದರು.