ಕರ್ನಾಟಕ

karnataka

ETV Bharat / state

ದೂರು ಕೊಟ್ಟಿದ್ದ ಮಹಿಳೆಗೆ ಕೊರೊನಾ ದೃಢ: ಹೆಡ್ ಕಾನ್ಸ್​​ಟೇಬಲ್​​ ಕ್ವಾರಂಟೈನ್​​​

ದೂರು ಸಲ್ಲಿಸಿದ್ದ ಮಹಿಳೆಯನ್ನು ಮಂಗಳವಾರ ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಲು ಕರೆದುಕೊಂಡು ಹೋಗಲಾಗಿತ್ತು. ಈ ವೇಳೆ ನ್ಯಾಯಾಧೀಶರ ಸೂಚನೆ ಮೇರೆಗೆ ದೂರುದಾರಳಿಗೆ ಕೊರೊನಾ ಟೆಸ್ಟ್ ಮಾಡಿಸಲಾಗಿತ್ತು. ಸದ್ಯ ಆಕೆಗೆ ಸೋಂಕು ದೃಢಪಟ್ಟಿದ್ದು, ಅವರನ್ನು ಕರೆದುಕೊಂಡು ಹೋಗಿದ್ದ ಠಾಣೆಯ ಮಹಿಳಾ ಹೆಡ್ ಕಾನ್ಸ್​​ಟೇಬಲ್ ಅವರನ್ನು ಸಾಂಸ್ಥಿಕ ಕ್ವಾರಂಟೈನ್​​ಗೆ ಒಳಪಡಿಸಲಾಗಿದೆ.

SP Sathish
SP Sathish

By

Published : Jul 9, 2020, 5:30 PM IST

ಗದಗ: ನ್ಯಾಯಾಧೀಶರ ಮುಂದೆ ಹೇಳಿಕೆ ಕೊಡಲು ಹೋಗಿದ್ದ ದೂರುದಾರ ಮಹಿಳೆಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆ ಮಹಿಳಾ ಹೆಡ್ ಕಾನ್ಸ್​​ಟೇಬಲ್​ವೊಬ್ಬರನ್ನು ಸಾಂಸ್ಥಿಕ‌‌ ಕ್ವಾರಂಟೈನ್​​ಗೆ ಒಳಪಡಿಸಲಾಗಿದೆ.

ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದೆ. ಎರಡು ತಿಂಗಳ ಹಿಂದೆ ಪಟ್ಟಣದ‌ ಪೊಲೀಸ್ ಠಾಣೆಯಲ್ಲಿ ಸ್ಥಳೀಯ ಮಹಿಳೆಯೊಬ್ಬರು ಗಂಡನ ವಿರುದ್ಧ ವರದಕ್ಷಿಣೆ ಕಿರುಕುಳದ ದೂರು ದಾಖಲಿಸಿದ್ದರು. ಹಾಗಾಗಿ ಮಹಿಳೆಯನ್ನು ಮಂಗಳವಾರ ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಲು ಕರೆದುಕೊಂಡು ಹೋಗಲಾಗಿತ್ತು. ಈ ವೇಳೆ ನ್ಯಾಯಾಧೀಶರ ಸೂಚನೆ ಮೇರೆಗೆ ದೂರುದಾರಳಿಗೆ ಕೊರೊನಾ ಟೆಸ್ಟ್ ಮಾಡಿಸಲಾಗಿತ್ತು.

ಸದ್ಯ ವರದಿ ಪಾಸಿಟಿವ್ ಎಂದು ಬಂದ ಹಿನ್ನೆಲೆ ಅವರನ್ನು ಕರೆದುಕೊಂಡು ಹೋಗಿದ್ದ ಠಾಣೆಯ ಮಹಿಳಾ ಹೆಡ್ ಕಾನ್ಸ್​​​​ಟೇಬಲ್​​​ಗೆ ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗಿದೆ ಎಂದು ಎಸ್​​ಪಿ ಯತೀಶ್ ಎನ್. ತಿಳಿಸಿದ್ದಾರೆ.

ABOUT THE AUTHOR

...view details