ಗದಗ:ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವರುಣನ ಅವಾಂತರದಿಂದ ಅತಿವೃಷ್ಟಿ ನಿರ್ಮಾಣವಾಗಿದ್ದು, ಇದೀಗ ಮುದ್ರಣ ಕಾಶಿ ಗದಗ ಜಿಲ್ಲೆಯಲ್ಲೂ ಮಳೆಯ ಆರ್ಭಟ ಮುಂದುವರಿದಿದೆ.
ಮುದ್ರಣ ಕಾಶಿಯಲ್ಲೂ ವರುಣನ ಆರ್ಭಟ: ಜನಜೀವನ ಸಂಪೂರ್ಣ ಅಸ್ತವ್ಯಸ್ತ
ಗದಗ ಜಿಲ್ಲಾದ್ಯಂತ ಮಳೆ ಅವಾಂತರ ಸೃಷ್ಟಿಸಿದ್ದು, ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಗಜೇಂದ್ರಗಡ, ಶಿರಹಟ್ಟಿ ಹಾಗೂ ಲಕ್ಷ್ಮೇಶ್ವರ ಭಾಗದ ಕೆಲ ಮನೆಗಳು ಧರೆಗುರುಳಿವೆ.
ಜಿಲ್ಲೆಯ ಹಲವೆಡೆ ಧಾರಾಕಾರ ಮಳೆಯಾಗಿದ್ದು, ಮನೆಗಳು ಹಾಗೂ ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಇನ್ನು ಗಜೇಂದ್ರಗಡ, ಶಿರಹಟ್ಟಿ ಹಾಗೂ ಲಕ್ಷ್ಮೇಶ್ವರ ಭಾಗದ ಜನರು ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಕಂಗಾಲಾಗಿದ್ದಾರೆ.
ಗ್ರಾಮೀಣ ಪ್ರದೇಶದ ರೈತ ಕುಟುಂಬಗಳು ಮಳೆಯಿಂದ ಸೋರುತ್ತಿರುವ ತಮ್ಮ ಮನೆಗಳನ್ನು ಕಾಪಾಡಿಕೊಳ್ಳಲು ತಾಡಪತ್ರೆಗಳ ಖರೀದಿಗೆ ಮುಂದಾಗಿದ್ದಾರೆ. ಇನ್ನು ಮಳೆಯ ಅವಾಂತರದಿಂದ ಲಕ್ಷ್ಮೇಶ್ವರ ಪಟ್ಟಣದ ಕಂದಾಯ ಇಲಾಖೆಯ ಗಣಕಯಂತ್ರದ ಕೊಠಡಿ ಸೋರುತ್ತಿದೆ. ಈ ಹಿನ್ನೆಲೆಯಲ್ಲಿ ಕಂಪ್ಯೂಟರ್ಗೆ ಛತ್ರಿಯನ್ನು ಇಟ್ಟು ಯಂತ್ರಗಳನ್ನು ರಕ್ಷಿಸಿಕೊಳ್ಳಲಾಗುತ್ತಿದೆ.