ಗದಗ:ಮಾನಸಿಕ ಅಸ್ವಸ್ಥೆ ಮೇಲೆ ಕಾಮುಕನೊಬ್ಬ ಅತ್ಯಾಚಾರ ಎಸಗಿರುವ ಘಟನೆ ಜಿಲ್ಲೆಯ ಮುಂಡರಗಿ ಪಟ್ಟಣದಲ್ಲಿ ನಡೆದಿದೆ.
ಮಾನಸಿಕ ಅಸ್ವಸ್ಥೆ ಮೇಲೆ ಅತ್ಯಾಚಾರ: ಆರೋಪಿಗೆ ಥಳಿಸಿ ಪೊಲೀಸರಿಗೊಪ್ಪಿಸಿದ ಸ್ಥಳೀಯರು
ಮಾನಸಿಕ ಅಸ್ವಸ್ಥೆ ಮೇಲೆ ಕಾಮುಕನೊಬ್ಬ ಅತ್ಯಾಚಾರ ಎಸಗಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ಪಟ್ಟಣದಲ್ಲಿ ನಡೆದಿದ್ದು, ಆರೋಪಿಯನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಮಾನಸಿಕ ಅಸ್ವಸ್ಥೆ ಮೇಲೆ ಅತ್ಯಾಚಾರ
ಸುರೇಶ್ ಡಂಬಳ (29) ಅತ್ಯಾಚಾರವೆಸಗಿದ ಆರೋಪಿಯಾಗಿದ್ದು, ಕೊಪ್ಪಳ ಜಿಲ್ಲೆಯ ಘಟ್ಟಿರೆಡ್ಡಿಹಾಳ ಗ್ರಾಮದವ ಎನ್ನಲಾಗಿದೆ. ಶನಿವಾರ ರಾತ್ರಿಯೇ ಈ ಘಟನೆ ನಡೆದಿದ್ದು, ಭಾನುವಾರ ಬೆಳಗ್ಗೆ ಮತ್ತೆ ಆಕೆಯನ್ನು ಕಾಮುಕ ಕರೆದೊಯ್ಯಲು ಬಂದಾಗ ಅಸ್ವಸ್ಥೆ ಸಹಾಯಕ್ಕಾಗಿ ಕೂಗಿದ್ದಾಳೆ. ತಕ್ಷಣ ಸ್ಥಳೀಯರು ಕಾಮುಕನನ್ನ ಹಿಡಿದು ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಕೊರ್ಲಹಳ್ಳಿಯ ಸೇತುವೆ ಬಳಿ ಕಾಮುಕ ಮಾನಸಿಕ ಅಸ್ವಸ್ಥೆ ಮೇಲೆ ಅತ್ಯಾಚಾರ ಎಸಗಿದ್ದನೆಂದು ತಿಳಿದು ಬಂದಿದ್ದು, ಈ ಕುರಿತು ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.