ಕರ್ನಾಟಕ

karnataka

ETV Bharat / state

ತಲೆ ಮೇಲೆ ಕಲ್ಲು ಎತ್ತಿ ಹಾಕಿ ಸೆಕ್ಯೂರಿಟಿ ಗಾರ್ಡ್​​​ ಬರ್ಬರ ಕೊಲೆ - ಗದಗ ಸಕ್ಕರೆ ಕಾರ್ಖಾನೆ

ಗಂಗಾಪೂರ ಗ್ರಾಮದ ಬಳಿ ಇರುವ ವಿಜಯನಗರ ಸಕ್ಕರೆ ಕಾರ್ಖಾನೆಯಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಫಕ್ಕಿರೇಶ್ ತಳವಾರ (32) ಭೀಕರವಾಗಿ ಕೊಲೆ ಮಾಡಲಾಗಿದೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

security-guards-brutally-killed-when-he-was-sleeping
ಮನೆಯಲ್ಲಿ ಮಲಗಿದ್ದ ಸೆಕ್ಯೂರಿಟಿ ಗಾರ್ಡ್ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರ ಕೊಲೆ

By

Published : Nov 13, 2020, 2:06 PM IST

ಗದಗ: ಮನೆಯಲ್ಲಿ ಮಲಗಿದ್ದ ಸೆಕ್ಯೂರಿಟಿ ಗಾರ್ಡ್​​ನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ದುಷ್ಕರ್ಮಿಗಳು ಬಳಿಕ ಪರಾಯಾಗಿರುವ ಘಟನೆ ಗದಗದಲ್ಲಿ ನಡೆದಿದೆ. ಜಿಲ್ಲೆಯ ಮುಂಡರಗಿ ತಾಲೂಕಿನ ಗಂಗಾಪೂರ ಗ್ರಾಮದಲ್ಲಿ ಮಧ್ಯರಾತ್ರಿ ಈ ದುಷ್ಕೃತ್ಯ ನಡೆದಿದೆ.

ಗಂಗಾಪೂರ ಗ್ರಾಮದ ಬಳಿ ಇರುವ ವಿಜಯನಗರ ಸಕ್ಕರೆ ಕಾರ್ಖಾನೆಯಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಫಕ್ಕಿರೇಶ್ ತಳವಾರ (32) ಕೊಲೆಗೀಡಾದ ದುರ್ದೈವಿ. ಸುದ್ದಿ ತಿಳಿದ ಮುಂಡರಗಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೊಲೆಗೀಡಾದ ಫಕ್ಕಿರೇಶ್ ಪತ್ನಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ABOUT THE AUTHOR

...view details