ಕರ್ನಾಟಕ

karnataka

By

Published : Jul 16, 2021, 3:56 PM IST

ETV Bharat / state

7ನೇ ವರ್ಷಕ್ಕೆ ಕಾಲಿಟ್ಟ ಮಹದಾಯಿ ಹೋರಾಟ : ಕರಾಳ ದಿನವಾಗಿ ಆಚರಿಸಿದ ರೈತರು

ರೈತ ಸೇನಾ ಸಂಘಟನೆಯ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ ನೇತೃತ್ವದಲ್ಲಿ ಪಾದಯಾತ್ರೆ ನಡೆಯಿತು. ಇದೇ ಸಂದರ್ಭದಲ್ಲಿ ಕಳಸಾ-ಬಂಡೂರಿ ಹೋರಾಟದಲ್ಲಿ ನಿಧಾನರಾದ ರೈತರಿಗೆ ಒಂದು ನಿಮಿಷಗಳ ಕಾಲ ಮೌನಾಚರಣೆ ಮಾಡುವ ಮೂಲಕ ಸ್ಮರಿಸಲಾಯಿತು..

seven-year-for-mahadayi-protest
ಮಹದಾಯಿ ಹೋರಾಟ

ಗದಗ :ಮಲಪ್ರಭಾ ನದಿಗೆ ಮಹದಾಯಿ ನದಿ ಜೋಡಣೆಗೆ ಆಗ್ರಹಿಸಿ ಜಿಲ್ಲೆಯ ನರಗುಂದ ತಾಲೂಕಿನ ರೈತರು ನಡೆಸುತ್ತಿರುವ ಹೋರಾಟ ಇಂದಿಗೆ 7ನೇ ವರ್ಷಕ್ಕೆ ಕಾಲಿಟ್ಟ ಹಿನ್ನೆಲೆ ಜಿಲ್ಲೆಯ‌ ನರಗುಂದ ಪಟ್ಣಣದಲ್ಲಿ ರೈತರು ಮೌನ ಪ್ರತಿಭಟನಾ ರ್ಯಾಲಿ ನಡೆಸಿದರು.

ಏಳನೇ ವರ್ಷಕ್ಕೆ ಕಾಲಿಟ್ಟ ಮಹದಾಯಿ ಹೋರಾಟ

ಕೈಗೆ ಕಪ್ಪು ಪಟ್ಟಿ ಧರಿಸಿ‌ ಹಾಗೂ ಕಪ್ಪು‌ ಬಾವುಟ ಪ್ರದರ್ಶಿಸಿ ಕರಾಳ ದಿನ ಆರಚಣೆ ಮಾಡಿದರು. ರೈತ ಸೇನಾ ಸಂಘಟನೆಯ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ ನೇತೃತ್ವದಲ್ಲಿ ಪಾದಯಾತ್ರೆ ನಡೆಯಿತು. ಇದೇ ಸಂದರ್ಭದಲ್ಲಿ ಕಳಸಾ-ಬಂಡೂರಿ ಹೋರಾಟದಲ್ಲಿ ನಿಧಾನರಾದ ರೈತರಿಗೆ ಒಂದು ನಿಮಿಷಗಳ ಕಾಲ ಮೌನಾಚರಣೆ ಮಾಡುವ ಮೂಲಕ ಸ್ಮರಿಸಲಾಯಿತು.

ನಂತರ ಬಾಬಾ ಸಾಹೇಬ್ ಬಾವೆ ಪುತ್ಥಳಿಯಿಂದ ಪಟ್ಟಣದ ಪ್ರಮುಖ ರಸ್ತೆಯಲ್ಲಿ ಪ್ರತಿಭಟನಾ ರ್ಯಾಲಿ ನಡೆಸಲಾಯಿತು. ರ್ಯಾಲಿ ಬಳಿಕ ಹೋರಾಟದ ವೇದಿಕೆಯಲ್ಲಿ ಮುಂದಿನ ಹೋರಾಟದ ರೂಪುರೇಷದ ನಿರ್ಣಯಗಳನ್ನ ಕೈಗೊಳ್ಳಲಾಯಿತು.

ABOUT THE AUTHOR

...view details