ಗದಗ:ತಾಯಿ ಮೃತಪಟ್ಟ ಹಿನ್ನೆಲೆ ವ್ಯಕ್ತಿಯೊಬ್ಬ ಮನನೊಂದು ಚಲಿಸುವ ರೈಲಿನಡಿ ತಲೆಯೊಡ್ಡಿ ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ಗದಗ ನಗರದ ರೈಲು ನಿಲ್ದಾಣದಲ್ಲಿ ನಡೆದಿದೆ.
ತಾಯಿ ಸಾವು: ಮನನೊಂದ ಮಗ ಆತ್ಮಹತ್ಯೆಗೆ ಶರಣು - ಗಂಗಾಧರ
ತಾಯಿ ಮೃತಪಟ್ಟ ಹಿನ್ನೆಲೆಯಲ್ಲಿ ಮಗ ಮನನೊಂದು ಚಲಿಸುವ ರೈಲಿನಡಿ ತಲೆಯೊಡ್ಡಿ ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ಗದಗ ನಗರದ ರೈಲು ನಿಲ್ದಾಣದಲ್ಲಿ ನಡೆದಿದೆ.
ತಾಯಿ ಮೃತಪಟ್ಟ ಹಿನ್ನೆಲೆ ಮಗ ಮನನೊಂದು ಆತ್ಮಹತ್ಯೆಗೆ ಶರಣು
ಮೂಲತಃ ಕೊಪ್ಪಳ ಜಿಲ್ಲೆ ಕುಕನೂರು ತಾಲೂಕಿನ ಲಕಮಾಪೂರ ಗ್ರಾಮದ ನಿವಾಸಿ ಗಂಗಾಧರ ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಎಂದು ತಿಳಿದು ಬಂದಿದೆ. ಎರಡು ದಿನಗಳ ಹಿಂದೆ ತಾಯಿ ಮೃತಪಟ್ಟಿದ್ದು, ತಾಯಿಯನ್ನು ಕಳೆದುಕೊಂಡ ವೇದನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ.
ಸದ್ಯ ಗದಗ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.