ಕರ್ನಾಟಕ

karnataka

ETV Bharat / state

9ದಿನ ಗಣೇಶೋತ್ಸವ ಆಚರಿಸುತ್ತೇವೆ.. ಸರ್ಕಾರಕ್ಕೆ ಶ್ರೀರಾಮಸೇನೆ ಸವಾಲು! - ಗದಗ ಸುದ್ದಿ

ಗಣೇಶ ಹಬ್ಬದ ಮಾರ್ಗಸೂಚಿಗಳ ಪರಿಷ್ಕರಣೆಗೆ ಆಗ್ರಹಿಸಿ ಶ್ರೀರಾಮಸೇನೆ ಗದಗದಲ್ಲಿ ಪ್ರತಿಭಟನೆ ನಡೆಸಿದ್ದು,ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆಗೆ 5 ದಿನದ ಬದಲು ಜಿಲ್ಲೆಯಾದ್ಯಂತ 9 ಅವಕಾಶ ನೀಡುವಂತೆ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದೆ.

sriram sene protest to revise ganesh festival guidelines
ಶ್ರೀರಾಮಸೇನೆ ಕಾರ್ಯಕರ್ತರ ಪ್ರತಿಭಟನೆ

By

Published : Sep 9, 2021, 7:10 PM IST

ಗದಗ: ನಾಳೆಯಿಂದ 9 ದಿನಗಳ ಕಾಲ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡುವಂತೆ ಆಗ್ರಹಿಸಿ ಶ್ರೀರಾಮಸೇನೆ ಕಾರ್ಯಕರ್ತರು ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು.

ಶ್ರೀರಾಮಸೇನೆ ಕಾರ್ಯಕರ್ತರ ಪ್ರತಿಭಟನೆ

ಸರ್ಕಾರದ ನಿಯಮಾವಳಿಗಳನ್ನು ಖಂಡಿಸಿ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ಕೂಡಲೇ ಗಣೇಶ ಹಬ್ಬದ ಮಾರ್ಗಸೂಚಿಗಳ ಪರಿಷ್ಕರಣೆ ಆಗಬೇಕು ಎಂದು ಆಗ್ರಹಿಸಿದರು.

ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆಗೆ 5 ದಿನದ ಬದಲು ಜಿಲ್ಲೆಯಾದ್ಯಂತ 9 ಆಚರಿಸಲು ಶ್ರೀರಾಮಸೇನೆ ನಿರ್ಧಾರ ಮಾಡಲಾಗಿದೆ. ಇದಕ್ಕೆ ಸರ್ಕಾರ ಸಹಕಾರ ನೀಡಬೇಕು. ಜೊತೆಗೆ ಶಾಲಾ-ಕಾಲೇಜುಗಳಲ್ಲೂ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ಕೊಡಬೇಕು ಎಂದು ಒತ್ತಾಯಿಸಿದರು. ನಮ್ಮ ಬೇಡಿಕೆ ಈಡೇರದಿದ್ರೆ ಉಗ್ರವಾದ ಹೋರಾಟ ಮಾಡುವುದಾಗಿ ಸಂಘಟಕರು ಸರ್ಕಾರಕ್ಕೆ ಎಚ್ಚರಿಕೆ ರವಾನಿಸಿದರು.

ನೀವು ಗಣೇಶ ಉತ್ಸವ ಆಚರಣೆಗೆ ಅಡೆತಡೆ ಮಾಡಿ ನಿಮ್ಮ ಲಾಠಿ ಏಟು ಹಾಗೂ ಬಂದೂಕಿನ ಗುಂಡಿಗೂ ಹೆದರುವುದಿಲ್ಲ. ನಿಮ್ಮ ಗುಂಡಿಗೆ ನಮ್ಮ ಎದೆ ಗುಂಡಿಗೆ ಒಡ್ಡಲು ಸಿದ್ಧರಿದ್ದೇವೆ. ಯಾವುದಕ್ಕೂ ಬಗ್ಗುವ ಜಗ್ಗುವ ಮಾತೇ ಇಲ್ಲ. ತಾಕತ್ ಇದ್ರೆ ಆಚರಣೆ ತಡೆಯಲಿ ಎಂದು ಸರ್ಕಾರಕ್ಕೆ ಸವಾಲ್ ಹಾಕಿದರು.

ಶ್ರೀರಾಮಸೇನೆ ಧಾರವಾಡ ವಿಭಾಗದ ಸಂಚಾಲಕ ರಾಜು ಖಾನಪ್ಪನವರ್ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯಿತು. ಅನೇಕ ಕಾರ್ಯಕರ್ತರು ಈ ಧರಣಿಯಲ್ಲಿ ಭಾಗವಹಿಸಿದ್ದರು. ನಂತರ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ABOUT THE AUTHOR

...view details