ಗದಗ: ಹಾವೇರಿ ಜಿಲ್ಲೆಯ ಗಡಿಗೆ ಹೊಂದಿಕೊಂಡಿರುವ ಲಕ್ಷ್ಮೇಶ್ವರ ಪಟ್ಟಣದಿಂದ ಗದಗ ಕಡೆ ತೆರಳಲು ಬೆಳಗ್ಗೆ ಸಮಯಕ್ಕೆ ಸರಿಯಾಗಿ ಬಸ್ಗಳು ಬರುತ್ತಿಲ್ಲ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ. ಪ್ರತಿ ಬಾರಿ ಪ್ರತಿಭಟನೆ ಮಾಡಿ ಅಧಿಕಾರಿಗಳಿಗೆ ತಿಳಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಇಂದೂ ಸಹ ಲಕ್ಷ್ಮೇಶ್ವರ ಪಟ್ಟಣದಲ್ಲಿ ನೂರಾರು ವಿದ್ಯಾರ್ಥಿಗಳು ಸಮಸ್ಯೆ ಪರಿಹರಿಸಲು ಒತ್ತಾಯಿಸಿ ಬಸ್ ನಿಲ್ಲಿಸಿ ಪ್ರತಿಭಟನೆ ಮಾಡಿದ್ದಾರೆ.
ಗದಗದಲ್ಲಿ ಬಸ್ ತಡೆದು ವಿದ್ಯಾರ್ಥಿಗಳ ಪ್ರತಿಭಟನೆ - Etv Bharat Kannada
ಗದಗಿನ ಕೆಲವು ಹಳ್ಳಿಗಳಲ್ಲಿ ಸರಿಯಾದ ಸಮಯಕ್ಕೆ ಬಸ್ಗಳು ಬರುತ್ತಿಲ್ಲ ಎಂದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.
ವಿದ್ಯಾರ್ಥಿಗಳ ಪ್ರತಿಭಟನೆ
"ಬೆಳಿಗ್ಗೆ ಬಸ್ಗಳು ಬರದೇ ಸರಿಯಾದ ಸಮಯಕ್ಕೆ ಕಾಲೇಜಿಗೆ ಹೋಗೋಕೆ ಸಮಸ್ಯೆಯಾಗುತ್ತಿದೆ. ಇದರಿಂದ ನಾವು ಹೋಗುವುದರೊಳಗಾಗಿ ಒಂದೆರಡು ತರಗತಿಗಳು ಮುಗಿದು ಅಭ್ಯಾಸಕ್ಕೆ ತೊಂದರೆ ಆಗುತ್ತಿದೆ" ಎಂದು ವಿದ್ಯಾರ್ಥಿಗಳು ತಿಳಿಸಿದ್ದಾರೆ. ಸ್ಥಳಕ್ಕೆ ಲಕ್ಷ್ಮೇಶ್ವರ ಪೊಲೀಸರು ಆಗಮಿಸಿ ವಿದ್ಯಾರ್ಥಿಗಳು ಪ್ರತಿಭಟನೆ ಕೈಬಿಡುವಂತೆ ಮನವೊಲಿಸಿದರು.
ಇದನ್ನೂ ಓದಿ:ರಾಜ್ಯದಲ್ಲೂ ಸ್ಕ್ರ್ಯಾಪ್ ನೀತಿ ಜಾರಿ: 15 ವರ್ಷಕ್ಕಿಂತ ಹಳೆಯ ವಾಹನಗಳಿನ್ನು ಗುಜರಿಗೆ