ಕರ್ನಾಟಕ

karnataka

By

Published : Jan 15, 2021, 7:50 PM IST

ETV Bharat / state

ಕೋವಿಡ್​ ಲಸಿಕೆ ನೀಡಲು ಜಿಲ್ಲಾಡಳಿತ ಸಕಲ ಸಿದ್ಧ: ಡಿಸಿ ಡಾ. ಆನಂದ್ ಕೆ

ಜಿಲ್ಲೆಯಲ್ಲಿ ನಾಳೆ 7 ಲಸಿಕಾ ಕೇಂದ್ರಗಳಲ್ಲಿ ಕೋವಿಡ್​ ಲಸಿಕೆ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು ಎಂದು ಡಿಸಿ ಡಾ. ಆನಂದ್ ಕೆ ತಿಳಿಸಿದ್ದಾರೆ.

meeting
ಸಭೆ

ಗದಗ:ಮಹಾಮಾರಿ ಕೋವಿಡ್ ಸೋಂಕಿಗೆ ಲಸಿಕೆ ಲಭ್ಯವಾಗಿದ್ದು, ಗದಗ ಜಿಲ್ಲೆಗೆ 5,500 ಕೋವಿಡ್-19 ಲಸಿಕೆಯನ್ನು ಹಂಚಿಕೆ ಮಾಡಲಾಗಿದೆ. ಜಿಲ್ಲೆಯಲ್ಲಿ ಗುರುತಿಸಲಾದ 7 ಲಸಿಕೆ ಕೇಂದ್ರಗಳಲ್ಲಿ ಶನಿವಾರ ಲಸಿಕೆ ನೀಡುವ ಪ್ರಕ್ರಿಯೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ (ಪ್ರ) ಡಾ. ಆನಂದ್ ಕೆ ಅವರು ತಿಳಿಸಿದ್ದಾರೆ.

ಜಿಲ್ಲಾಡಳಿತ ಭವನದ ವಿಡಿಯೋ ಸಂವಾದ ಸಭಾಂಗಣದಲ್ಲಿ ಜರುಗಿದ ರಾಜ್ಯದ ಮಟ್ಟದ ವಿಡಿಯೋ ಸಂವಾದ ಸಭೆಯ ನಂತರ ಮಾತನಾಡಿದ ಅವರು, ಕೋವಿಡ್-19 ಲಸಿಕೆ ನೀಡುವ ಪ್ರಕ್ರಿಯೆಗೆ ಜನೆವರಿ 16 ರಂದು ಬೆಳಗ್ಗೆ 10.30 ಗಂಟೆಗೆ ಪ್ರಧಾನಿ ನರೇಂದ್ರ ಮೋದಿಯವರು ಚಾಲನೆ ನೀಡುವರು. ನಂತರ ಜಿಲ್ಲೆಯಲ್ಲಿ ಲಸಿಕೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಗೆ ಹಂಚಿಕೆ ಮಾಡಿರುವ ಲಸಿಕೆಯನ್ನು ಗುರುತಿಸಲಾಗಿರುವ 7 ಲಸಿಕಾ ಕೇಂದ್ರಗಳಿಗೆ ವಿತರಿಸಲಾಗಿದೆ. ಪ್ರಥಮ ಹಂತದಲ್ಲಿ ಆರೋಗ್ಯ ಇಲಾಖೆ ನೌಕರರು, ಅಧಿಕಾರಿಗಳು ಸೇರಿದಂತೆ ವೈದ್ಯರು ಹಾಗೂ ಖಾಸಗಿ ಆಸ್ಪತ್ರೆಗಳ ವೈದ್ಯರು ಸಿಬ್ಬಂದಿಗಳಿಗೆ ಲಸಿಕೆ ನೀಡಲು ಸೂಚಿಸಲಾಗಿದ್ದು ಅದರಂತೆ ಕ್ರಮ ವಹಿಸಲು ತಿಳಿಸಿದರು.

ಲಸಿಕೆಯನ್ನು ಬೆಳಗ್ಗೆ 9 ರಿಂದ ಸಂಜೆ 5 ರವರೆಗೆ ನೀಡಲು ಸರ್ಕಾರವು ಸೂಚಿಸಿದ್ದು ಅದರಂತೆ ನೀಡಬೇಕು. ಲಸಿಕೆ ಪಡೆಯಲು ಆಗಮಿಸುವವರು ಕಡ್ಡಾಯವಾಗಿ ಕೋವಿಡ್-19 ಸೋಂಕಿನ ನಿಯಂತ್ರಣ ಕ್ರಮಗಳಾದ ಕಡ್ಡಾಯ ಮಾಸ್ಕ್ ಧರಿಸುವಿಕೆ, ಸಾಮಾಜಿಕ ಅಂತರ ಹಾಗೂ ಸ್ಯಾನಿಟೈಜರ್ ಬಳಕೆಯನ್ನು ಮಾಡುವುದರೊಂದಿಗೆ ಸೋಂಕು ನಿಯಂತ್ರಣಕ್ಕೆ ಸಹಕರಿಸಬೇಕು. ಈ ನಿಟ್ಟಿನಲ್ಲಿ ಇಲಾಖೆಯ ಅಧಿಕಾರಿಗಳು ನಿಗಾ ವಹಿಸಬೇಕೆಂದು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ ಬಸರಿಗಿಡದ, ಆರೋಗ್ಯ ಇಲಾಖೆಯ ಉನ್ನತ ಅಧಿಕಾರಿಗಳು, ಪೊಲೀಸ್​ ಇಲಾಖೆಯ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಿಬ್ಬಂದಿಗಳು ಇದ್ದರು.

ABOUT THE AUTHOR

...view details