ಗದಗ:ಪಾಲಕರ ಅಭಿಪ್ರಾಯ ಸಂಗ್ರಹ ಸಭೆ ನೆಪದಲ್ಲಿ ಹರ್ಬಲ್ ಪ್ರಾಡಕ್ಟ್ ಮಾರ್ಕೆಟಿಂಗ್ ಮಾಡಿರುವ ಬಗ್ಗೆ ಗಂಭೀರ ಆರೋಪ ಕೇಳಿಬಂದಿರುವ ಹಿನ್ನೆಲೆ, ಚಿಕ್ಕಟ್ಟಿ ಖಾಸಗಿ ಶಿಕ್ಷಣ ಸಂಸ್ಥೆಗೆ ತಹಶೀಲ್ದಾರ್ ಶ್ರೀನಿವಾಸ್ ಮೂರ್ತಿ ನೋಟಿಸ್ ಜಾರಿ ಮಾಡಿದ್ದಾರೆ.
ಗದಗ ಹೊರವಲಯದ ಮುಂಡರಗಿ ರಸ್ತೆಯ ಚಿಕ್ಕಟ್ಟಿ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಜೂನ್ 18 ರಂದು ಜಿಲ್ಲಾಡಳಿತದ ಅನುಮತಿ ಪಡೆಯದೆ, ನೂರಾರು ಪಾಲಕರನ್ನ ಸೇರಿಸಿ ಸಭೆ ನಡೆಸಲಾಗಿತ್ತು. ಜೊತೆಗೆ ಪಾಲಕರ ಅಭಿಪ್ರಾಯ ಸಭೆ ನೆಪದಲ್ಲಿ ಹರ್ಬಲ್ ಪ್ರಾಡಕ್ಟ್ ಮಾರ್ಕೆಟಿಂಗ್ ಮಾಡಿರುವ ಬಗ್ಗೆ ಗಂಭೀರ ಆರೋಪ ಕೇಳಿಬಂದಿತ್ತು. ಈ ಕುರಿತು ಶುಕ್ರವಾರ ಮುಂಜಾನೆ ಈಟಿವಿ ಭಾರತ ಸುದ್ದಿ ಪ್ರಸಾರ ಮಾಡಿತ್ತು.