ಗದಗ:ಜಿಲ್ಲೆಯಲ್ಲಿ ಗಣಿತ ಪರೀಕ್ಷೆ ಬರೆಯುವ ವೇಳೆ ನಕಲು ಮಾಡುತ್ತಿದ್ದ ಮೂವರು ವಿದ್ಯಾರ್ಥಿಗಳನ್ನು ಡಿಬಾರ್ ಮಾಡಲಾಗಿದೆ.
ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ನಕಲು: ಮೂವರು ವಿದ್ಯಾರ್ಥಿಗಳು ಡಿಬಾರ್
ಗದಗದ ಗಾಂಧಿ ಸರ್ಕಲ್ ಬಳಿ ಇರುವ ಮುನ್ಸಿಪಲ್ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ನಕಲು ಮಾಡಿದ ಮೂವರು ವಿದ್ಯಾರ್ಥಿಗಳನ್ನು ಧಾರವಾಡ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಮೇಜರ್ ಸಿದ್ದಲಿಂಗಯ್ಯ ಹಿರೇಮಠ ಡಿಬಾರ್ ಮಾಡಿ ಆದೇಶ ಹೊರಡಿಸಿದ್ದಾರೆ.
ಮೂವರು ವಿದ್ಯಾರ್ಥಿಗಳು ಡಿಬಾರ್
ಗಾಂಧಿ ಸರ್ಕಲ್ ಬಳಿ ಇರುವ ಮುನ್ಸಿಪಲ್ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಘಟನೆ ನಡೆದಿದ್ದು, ಧಾರವಾಡ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಮೇಜರ್ ಸಿದ್ದಲಿಂಗಯ್ಯ ಹಿರೇಮಠ ಡಿಬಾರ್ ಮಾಡಿ ಆದೇಶ ಹೊರಡಿಸಿದ್ದಾರೆ.
ಆಯುಕ್ತರು ನಗರದಲ್ಲಿ ನಡೆಯುತ್ತಿರುವ ಪರೀಕ್ಷಾ ಪರಿಶೀಲನೆಯಲ್ಲಿ ತೊಡಗಿದ್ದರು. ಈ ವೇಳೆ ಪರೀಕ್ಷಾ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿದ್ದ ವೇಳೆ ನಕಲು ಮಾಡುತ್ತಿದ್ದಾಗ ಮೂವರು ವಿದ್ಯಾರ್ಥಿಗಳು ಸಿಕ್ಕಿಬಿದ್ದಿದ್ದಾರೆ.