ಕರ್ನಾಟಕ

karnataka

ETV Bharat / state

ನರಗುಂದದಲ್ಲಿ ಟ್ರ್ಯಾಕ್ಟರ್ ಪಲ್ಟಿ.. ಸ್ಥಳದಲ್ಲೇ ಇಬ್ಬರ ದುರ್ಮರಣ.. - ಗದಗ ನರಗುಂದ ಟ್ರ್ಯಾಕ್ಟರ್ ಪಲ್ಟಿ ಸುದ್ದಿ

ಗದಗ ಜಿಲ್ಲೆ ನರಗುಂದ ತಾಲೂಕಿನ ಚಿಕ್ಕ ನರಗುಂದ ಗ್ರಾಮದ ಹೊರವಲಯದಲ್ಲಿ ಜಮೀನು ಕೆಲಸ ಮುಗಿಸಿ ಮನೆಗೆ ಮರಳುವ ವೇಳೆ ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರು ಮೃತ ಪಟ್ಟ ಘಟನೆ ನಡೆದಿದೆ.

ಟ್ರ್ಯಾಕ್ಟರ್ ಪಲ್ಟಿ ಸ್ಥಳದಲ್ಲೇ ಇಬ್ಬರು ಸಾವು

By

Published : Oct 27, 2019, 7:52 PM IST

ಗದಗ: ಜಮೀನು ಕೆಲಸ ಮುಗಿಸಿ ಮನೆಗೆ ಮರಳುವ ವೇಳೆ ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರು ಮೃತ ಪಟ್ಟ ಘಟನೆ ಗದಗ ಜಿಲ್ಲೆ ನರಗುಂದ ತಾಲೂಕಿನ ಚಿಕ್ಕ ನರಗುಂದ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ಶಿವಾನಂದ(18), ಮಲ್ಲಿಕಾರ್ಜುನ ( 20) ಮೃತ ದುರ್ದೈವಿಗಳು. ಮೃತರಿಬ್ಬರೂ ಚಿಕ್ಕನರಗುಂದ ಗ್ರಾಮದ ನಿವಾಸಿಗಳು ಎಂದು ತಿಳಿದು ಬಂದಿದೆ. ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಇದರಿಂದ ಅದರ ಮಧ್ಯೆ ಸಿಲುಕಿ ಇಬ್ಬರೂ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ನರಗುಂದ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ABOUT THE AUTHOR

...view details