ಕರ್ನಾಟಕ

karnataka

ETV Bharat / state

ಗದಗ ಜಿಲ್ಲೆಯಲ್ಲಿ ಕೊರೊನಾ ಸಂಖ್ಯೆ ಇಳಿಮುಖ: ಇಂದು ಇಬ್ಬರು ಗುಣಮುಖ - ಕೊರೊನಾ ವೈರಸ್

ಗವಾಯಿ ನಾಡಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದ್ದು, ಇಂದು ಇಬ್ಬರು ಕೋವಿಡ್ ಸೋಂಕಿತರು ಗುಣಮುಖರಾಗಿದ್ದಾರೆ. ಇವರನ್ನು ಜಿಮ್ಸ್ ಆಸ್ಪತ್ರೆಯ ಸಿಬ್ಬಂದಿ ಚಪ್ಪಾಳೆ ತಟ್ಟುವ ಮೂಲಕ ಬೀಳ್ಕೊಟ್ಟರು.

Gadag corona virus updates
Gadag corona virus updates

By

Published : May 31, 2020, 4:23 PM IST

ಗದಗ:ಜಿಲ್ಲೆಯಲ್ಲಿಂದು ಮತ್ತೆ ಇಬ್ಬರು ಕೊರೊನಾ ಸೋಂಕಿತರು ಗುಣಮುಖರಾಗಿದ್ದು, ಕೋವಿಡ್ ಸೋಂಕಿತರ ಸಂಖ್ಯೆ 20ಕ್ಕೆ ಇಳಿದಿದೆ.

ಪಾಸಿಟಿವ್ ಬಂದ ಹಿನ್ನೆಲೆ ರೋಗಿ-1745 ಹಾಗೂ ರೋಗಿ- 1795ನ್ನು ಜಿಮ್ಸ್ ಆಸ್ಪತ್ರೆಯ ಕೋವಿಡ್ ವಿಭಾಗದಿಂದ ಬಿಡುಗಡೆ ಮಾಡಲಾಯಿತು.
ರೋಗಿ-1745 ಗುಜರಾತ್ ಪ್ರವಾಸದಿಂದ ಹಿಂದಿರುಗಿದ್ದರು. ಇವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿದಾಗ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಹೀಗಾಗಿ 22/05/2020 ರಂದು ನಗರದ ಜಿಮ್ಸ್ ನ ಕೋವಿಡ್ ಪ್ರತ್ಯೇಕ ವಿಭಾಗದಲ್ಲಿ ದಾಖಲಿಸಲಾಗಿತ್ತು.
ಸದ್ಯ ಇಬ್ಬರು ಗುಣಮುಖರಾಗಿದ್ದು, ಮುಂದಿನ 14 ದಿನಗಳ ಕಾಲ ಮನೆಯಲ್ಲಿಯೇ ನಿಗಾದಲ್ಲಿರುವಂತೆ ಹಾಗೂ ಆರೋಗ್ಯದಲ್ಲಿ ಏನಾದರೂ ತೊಂದರೆಯಾದಲ್ಲಿ ಕೂಡಲೇ ವೈದ್ಯಕೀಯ ನೆರವು ಪಡೆಯುವ ಸೂಚನೆ ನೀಡಿ ಚಪ್ಪಾಳೆ ತಟ್ಟುವ ಮೂಲಕ ಆತ್ಮಸ್ಥೈರ್ಯ ತುಂಬಿ ಬೀಳ್ಕೊಡಲಾಯಿತು.
ಇವರಿಬ್ಬರ ಬಿಡುಗಡೆ ಮೂಲಕ ಜಿಲ್ಲೆಯ ಸೋಂಕಿತರ ಸಂಖ್ಯೆ 20ಕ್ಕೆ ಇಳಿದಿದೆ. ಒಟ್ಟು 35 ಸೋಂಕಿತರಲ್ಲಿ, 14 ಜನ ಗುಣಮುಖರಾಗಿ ಮನೆ ಸೇರಿದ್ದಾರೆ. ಓರ್ವ ವೃದ್ಧೆ ಸಾವನ್ನಪ್ಪಿದ್ದಾಳೆ. ಉಳಿದ 20 ಜನರಿಗೆ ಜಿಮ್ಸ್ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ABOUT THE AUTHOR

...view details