ಗದಗ: ಬೇಸಿಯಲ್ಲೂ ವರುಣ ಅಬ್ಬರಿಸಿದ್ದಾನೆ. ಜಿಲ್ಲೆಯ ಶಿರಹಟ್ಟಿ ಪಟ್ಟಣದ ಹೊರವಲಯದಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಿದ್ದು, ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿರುವ ಘಟನೆ ನಿನ್ನೆ (ಶನಿವಾರ) ಸಂಜೆ ನಡೆದಿದೆ. ಮೃತರನ್ನು ಖಾನಾಪುರದ ಮಾಬುಸಾಬ ದೊಡ್ಡಮನಿ (55) ಹಾಗೂ ದನ ಮೇಯಿಸಲು ಹೋಗಿದ್ದ ಹರಿಪುರದ ನಿವಾಸಿ ಮುರುಗೇಶ ಹೊಸಮನಿ (40) ಎಂದು ಗುರುತಿಸಲಾಗಿದೆ.
ನಗರದಾದ್ಯಂತ ಮಧ್ಯಾಹ್ನ 3 ಗಂಟೆಯ ಸುಮಾರಿಗೆ ಗಾಳಿ, ಗುಡುಗು ಸಹಿತ ಭಾರಿ ಮಳೆಯಾಗಿದೆ. ಮಾಬುಸಾಬ ದೊಡ್ಡಮನಿ ಹರಿಪುರ ಹೊರವಲಯದಲ್ಲಿನ ಮಾವಿನ ತೋಟ ಕಾಯಲು ಹೋದಾಗ ಈ ಅವಘಡ ಸಂಭವಿಸಿದೆ ಎನ್ನಲಾಗ್ತಿದೆ.