ಕರ್ನಾಟಕ

karnataka

ETV Bharat / state

ಶೌಚಾಲಯದ ಗೋಡೆಗೆ ಕಾರು ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು - ಶೌಚಾಲಯದ ಗೋಡೆಗೆ ಕಾರ್ ಡಿಕ್ಕಿ

ಚಾಲಕನ ನಿಯಂತ್ರಣ ತಪ್ಪಿ ಶೌಚಾಲಯದ ಗೋಡೆಗೆ ಕಾರು ಡಿಕ್ಕಿಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗದಗದಲ್ಲಿ ನಡೆದಿದೆ.

ಗದಗ
ಗದಗ

By ETV Bharat Karnataka Team

Published : Nov 17, 2023, 3:28 PM IST

ಗದಗ :ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದಲ್ಲಿ ಇರುವ ಶೌಚಾಲಯದ ಗೋಡೆಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡ ದುರ್ಘಟನೆ ಕಳಸಾಪೂರ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಬೆಳಗಿನ ಜಾವ ಜರುಗಿದೆ.

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಸಿದ್ದಯ್ಯ ಪಾಟೀಲ್ ಹಾಗೂ ಬಾಬು ತಾರಿಹಾಳ ಎಂಬುವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮತ್ತೊಬ್ಬ ಶಶಿ ಪಾಟೀಲ್ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದು, ಜಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲು ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ ಇರುವ ಶೌಚಾಲಯದ ಗೋಡೆಗೆ ಕಾರು ಡಿಕ್ಕಿ ಹೊಡೆದಿದ್ದು, ಅಪಘಾತದ ರಭಸಕ್ಕೆ ಕಾರಿನಲ್ಲಿನ ಬಲೂನ್ ಬಿಚ್ಚಿದರೂ ಇಬ್ಬರ ಪ್ರಾಣ ಉಳಿದಿಲ್ಲ.

ಕೊಪ್ಪಳದಲ್ಲಿ ಸೇತುವೆ ತಡೆಗೋಡೆಗೆ ಕಾರ್ ಡಿಕ್ಕಿ :ಕೊಪ್ಪಳ ಜಿಲ್ಲೆಯ ಕುಕುನೂರು ತಾಲೂಕು ಬನ್ನಿಕೊಪ್ಪ ಗ್ರಾಮದ ಬಳಿ ಇರುವ ರಸ್ತೆ ಸೇತುವೆ ತಡೆಗೋಡೆಗೆ ಕಾರ್ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಅಸುನೀಗಿದ ಘಟನೆ (ಫೆ. 16 ರಂದು) ನಡೆದಿತ್ತು. ಇಬ್ಬರು ಮಹಿಳೆಯರು ಹಾಗೂ ಇಬ್ಬರು ಪುರುಷರು ಮೃತರು. ಇವರು ತೆಲಂಗಾಣ ಮೂಲದವರೆಂದು ತಿಳಿದುಬಂದಿತ್ತು. ಕುಕನೂರು ಪೊಲೀಸ್​ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿತ್ತು.

ಚಿಕ್ಕೋಡಿ ಅಪಘಾತ :ಕಾರ್-ಬೈಕ್‌ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರರಿಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬೆಳಕೂಡ ಗೇಟ್ ಬಳಿ ಸಂಭವಿಸಿತ್ತು. ಮೃತಪಟ್ಟ ಬೈಕ್​ ಸವಾರರಿಬ್ಬರು ಸಹೋದರರು. ಚಿಕ್ಕೋಡಿ ತಾಲೂಕಿನ ನವಳಿಹಾಳ ಗ್ರಾಮದ ಶಿವಕುಮಾರ ರಾಜು ಘೋಷೆ (25), ಅಶ್ವಿನ್​ಕುಮಾರ ರಾಜು ಘೋಷೆ (23) ಮೃತರೆಂದು ತಿಳಿದುಬಂದಿತ್ತು.

ಇವರು ಸ್ವಗ್ರಾಮದಿಂದ ಗೋಕಾಕ್​ ತಾಲೂಕಿನ ಶಿಂಧಿಕುರಬೇಟ ಎಂಬೆಡೆಗೆ ಹೊರಟಿದ್ದರು. ಕಾರ್ ಕಬ್ಬೂರು ಗ್ರಾಮದ ಕಡೆಯಿಂದ ಬರುತ್ತಿತ್ತು. ಬೆಳಕೂಡ ಗೇಟ್ ಬಳಿ ಕಾರ್ ಚಾಲಕ ಮುಂದಿದ್ದ ವಾಹನವನ್ನು ಓವರ್‌ಟೇಕ್ ಮಾಡಲು ಹೋಗಿ ಎದುರುಗಡೆ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದ್ದರು. ನಂತರ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದರು. ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ:ಕೊಪ್ಪಳದಲ್ಲಿ ಸೇತುವೆ ತಡೆಗೋಡೆಗೆ ಕಾರ್ ಡಿಕ್ಕಿ: ನಾಲ್ವರು ಸ್ಥಳದಲ್ಲೇ ಸಾವು

ABOUT THE AUTHOR

...view details