ಗದಗ: ಎತ್ತಿನ ಬಂಡಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಜಿಲ್ಲೆಯ ಶಿರಹಟ್ಟಿ ತಾಲೂಕಿನ ವರವಿ ಕ್ರಾಸ್ ಬಳಿ ಘಟನೆ ನಡೆದಿದೆ.
ಎತ್ತಿನ ಬಂಡಿಗೆ ಬೈಕ್ ಡಿಕ್ಕಿ: ಸವಾರರಿಬ್ಬರು ಸಾವು - bike raiders dead
ವೇಗವಾಗಿ ಬರುತ್ತಿದ್ದ ಬೈಕ್ ಸವಾರರು ಎತ್ತಿನ ಬಂಡಿಗೆ ಡಿಕ್ಕಿ ಹೊಡೆದ ಕಾರಣ ಸವಾರರಿಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಶಿರಹಟ್ಟಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸವಾರರಿಬ್ಬರು ಸಾವು
ಲಕ್ಷ್ಮೇಶ್ವರ ತಾಲೂಕಿನ ಬಟ್ಟೂರು ಗ್ರಾಮದ ನಿವಾಸಿಗಳಾದ ಪರಶುರಾಮ ಉಪ್ಪಾರ (25), ಆಸಿಮ್ ಸಾಬ್ ಸುಂಕದ (26) ಮೃತರು ಎಂದು ತಿಳಿದು ಬಂದಿದೆ.
ವೇಗವಾಗಿ ಬಂದ ಬೈಕ್ ಸವಾರರು ಕ್ರಾಸ್ನಲ್ಲಿ ಎತ್ತಿನ ಬಂಡಿಗೆ ಡಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ. ಇಬ್ಬರು ಹೆಲ್ಮೆಟ್ ಧರಿಸದ ಕಾರಣ ಅವರ ತಲೆಗೆ ತೀವ್ರ ಪೆಟ್ಟು ಬಿದ್ದು ಅಸುನೀಗಿದ್ದಾರೆ ಎಂದು ಸ್ಥಳೀಯರು ತಿಳಿಸಿದರು. ಶಿರಹಟ್ಟಿ ಠಾಣಾ ಪೊಲೀಸರು ಸ್ಥಳ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.