ಗದಗ: ಮಾಜಿ ಸಚಿವ ವಿನಯ ಕುಲಕರ್ಣಿ ಬಂಧನ ವಿಚಾರ ಜಾತಿ-ರಾಜಕಾರಣ ತಿರುವು ಪಡೆದುಕೊಂಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ತೋಂಟದಾರ್ಯ ಮಠದಲ್ಲಿ ಪಂಚಮಸಾಲಿ ಲಿಂಗಾಯತ ಸ್ವಾಮೀಜಿಗಳು ಸಭೆ ನಡೆಸಿದ್ದಾರೆ.
ಮಾಜಿ ಸಚಿವ ವಿನಯ್ ಕುಲಕರ್ಣಿ ಬಂಧನ: ಗದಗನಲ್ಲಿ ಪಂಚಮಸಾಲಿ ಸ್ವಾಮೀಜಿಗಳಿಂದ ಸಭೆ - ಗದಗ ತೋಂಟದಾರ್ಯ ಮಠ
ಮಾಜಿ ಸಚಿವ ವಿನಯ ಕುಲಕರ್ಣಿ ಬಂಧನ ವಿಚಾರ ಹಿನ್ನೆಲೆಯಲ್ಲಿ ಗದಗ ತೋಂಟದಾರ್ಯ ಮಠದ ಸಿದ್ದರಾಮ ಶ್ರೀಗಳ ನೇತೃತ್ವದಲ್ಲಿ ಪಂಚಮಸಾಲಿ ಲಿಂಗಾಯತ ಸ್ವಾಮೀಜಿಗಳು ಸಭೆ ನಡೆಸಿದ್ದಾರೆ.
ಗದಗ ತೋಂಟದಾರ್ಯ ಮಠದ ಸಿದ್ದರಾಮ ಶ್ರೀಗಳ ನೇತೃತ್ವದಲ್ಲಿ ಸಭೆ ನಡೆದಿದ್ದು, ಸಭೆಯಲ್ಲಿ ಕೂಡಲ ಸಂಗಮದ ಜಯಬಸವ ಮೃತ್ಯುಂಜಯ ಸ್ವಾಮಿಜಿ, ಮುಂಡರಗಿ-ಬೈದೂರು ತೋಂಟದಾರ್ಯ ಮಠದ ನಿಜಗುಣಪ್ರಭು ತೋಂಟದಾರ್ಯ ಸ್ವಾಮಿಜಿ, ಧಾರವಾಡ ಮುರುಗಾಮಠದ ಮಲ್ಲಿಕಾರ್ಜುನ ಸ್ವಾಮೀಜಿಗಳು ಭಾಗಿಯಾಗಿದ್ದಾರೆ.
ವಿನಯ್ ಕುಲಕರ್ಣಿ ಅವರ ಬಂಧನ ರಾಜಕೀಯ ಷಡ್ಯಂತ್ರ ಇದೆ ಅಂತ ಕಾಂಗ್ರೆಸ್ ನಾಯಕರು ಆರೋಪ ಮಾಡುತ್ತಿರುವಾಗಲೇ ಲಿಂಗಾಯತ ಸ್ವಾಮೀಜಿಗಳು ಈಗ ಸಭೆ ನಡೆಸ್ತಿರೋದು ಸದ್ಯ ಪ್ರಾಮುಖ್ಯತೆ ಪಡೆದುಕೊಂಡಿದೆ. ಇನ್ನು ಈಗಾಗಲೇ ಕೂಡಲಸಂಗಮದ ಬಸವ ಮೃತ್ಯುಂಜಯ ಸ್ವಾಮೀಜಿಗಳು ವಿನಯ್ ಕುಲಕರ್ಣಿ ಅವರ ಬಂಧನ ರಾಜಕೀಯ ಪ್ರೇರಿತ ಅಂತ ಆರೋಪ ಮಾಡಿದ್ದರು.