ಗದಗ: ಪಶು ವೈದ್ಯೆ ಮೇಲೆ ಅತ್ಯಾಚಾರ ಎಸಗಿ ಸುಟ್ಟುಹಾಕಿದ್ದ ಕಾಮುಕರ ಎನ್ಕೌಂಟರ್ ಮಾಡಿದ್ದ ಐಪಿಎಸ್ ಅಧಿಕಾರಿ ವಿಶ್ವನಾಥ್ ಸಜ್ಜನರ್ ಜಿಲ್ಲಾಡಳಿತಕ್ಕೆ 40 ಲಕ್ಷ ಮೌಲ್ಯದ ವೈದ್ಯಕೀಯ ಸಾಮಗ್ರಿ ನೆರವು ನೀಡಿದ್ದಾರೆ.
ಮೂಲತಃ ಗದಗ ಜಿಲ್ಲೆಯವರಾದ ಸಜ್ಜನರ್ ತೆಲಂಗಾಣ ರಾಜ್ಯದ ಸೈಬರಾಬಾದ್ ಪೊಲೀಸ್ ಆಯುಕ್ತರಾಗಿದ್ದಾರೆ. 22 ಆಕ್ಸಿಜನ್ ಕಾನ್ಸ್ಂಟ್ರೇಟರ್, 84 ಆಕ್ಸಿಜನ್ ಸಿಲಿಂಡರ್, 2000 ಕೋವಿಡ್ ಕಿಟ್, 20,000 ಮಾಸ್ಕ್, 200 ಲೀಟರ್ ಸ್ಯಾನಿಟೈಸರ್, 1000 ಫೇಸ್‌ಶೀಲ್ಡ್, 24 ಯುನಿಟ್ ರೆಮ್ಡೆಸಿವಿರ್ ಸೇರಿದಂತೆ ಇತರ ಔಷಧಿ ಸಾಮಗ್ರಿಗಳನ್ನು ನೀಡಿ ಮಾನವೀಯತೆ ಮೆರೆದಿದ್ದಾರೆ.