ಗದಗ:ಇಲ್ಲಿನ ನರಗುಂದ ತಾಲೂಕಿನ ಲಖಮಾಪುರ ಗ್ರಾಮದಲ್ಲಿ ಮನೆಗೋಡೆ ಕುಸಿದಿದೆ. ಅದೃಷ್ಟವಶಾತ್ ಮನೆಯಲ್ಲಿದ್ದ ಆರು ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗದಗದಲ್ಲಿ ಮನೆಗೋಡೆ ಕುಸಿತ: ಅದೃಷ್ಟವಶಾತ್ 6 ಮಂದಿ ಬಚಾವ್ - ಗದಗ
ನರಗುಂದ ತಾಲೂಕಿನ ಲಖಮಾಪುರ ಗ್ರಾಮದಲ್ಲಿ ಮನೆಗೋಡೆ ಕುಸಿದಿದ್ದು, ಮನೆಯಲ್ಲಿದ್ದ ಆರು ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮನೆಗೋಡೆ ಕುಸಿತ
ಗ್ರಾಮದ ಕಮಲವ್ವ ಮಡಿವಾಳ ಎಂಬವರಿಗೆ ಸೇರಿದ ಮನೆಯಾಗಿದ್ದು, ಜಿಲ್ಲೆಯಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಗೆ ಮನೆಗೋಡೆ ಕುಸಿದಿದೆ. ಗೋಡೆ ಕುಸಿಯುವ ವೇಳೆ 6 ಮಂದಿ ಒಳಗಡೆ ಮಲಗಿದ್ದರು. ಘಟನೆ ಸಂಭವಿಸುತ್ತಿದ್ದಂತೆ ಹೊರ ಓಡಿ ಬಂದಿದ್ದಾರೆ.
ಇಷ್ಟೆಲ್ಲಾ ಅವಾಂತರ ಸಂಭವಿಸಿದ್ದರೂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿಲ್ಲ ಎಂಬ ಆರೋಪ ಕೇಳಿಬಂದಿದೆ.