ಗದಗ:ರೋಣ ತಾಲೂಕಿನ ಯರೇಬೆಲೇರಿ ಗ್ರಾಮದಲ್ಲಿ ವಿಕಲಚೇತನ ಮಹಿಳೆಯೊಬ್ಬಳು ತನ್ನ ಮೇಲೆ ನಡೆದ ಅತ್ಯಾಚಾರ ಯತ್ನದ ಕೃತ್ಯದಿಂದ ಮರ್ಯಾದೆಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ವಿಕಲಚೇತನ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕ... ಮರ್ಯಾದೆಗೆ ಅಂಜಿ ಮಹಿಳೆ ಆತ್ಮಹತ್ಯೆ - gadag crime news
ಜೂನ್ 4 ರಂದು ಊರಿನ ಹೊರಗೆ ಆಡು ಮೇಯಿಸುವಾಗ ಅದೇ ಹಾದಿಯಲ್ಲಿ ಹೋಗುತ್ತಿದ್ದ ಗ್ರಾಮದ ಬಸಪ್ಪ ಬಾಳಪ್ಪ ಕಂಬಳಿ ಎನ್ನುವವನು ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಮೈಮೇಲಿನ ಬಟ್ಟೆಯನ್ನೆಲ್ಲಾ ಹರಿದು ಕೃತ್ಯ ಎಸಗಿದ್ದ ಎನ್ನಲಾಗಿದೆ.
ಯರೇಬೆಲೇರಿ ಗ್ರಾಮದ 40 ವರ್ಷದ ಮಹಿಳೆ ನಿನ್ನೆ ರಾತ್ರಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಇಂದು ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ. ಜೂನ್ 4 ರಂದು ಊರಿನ ಹೊರಗೆ ಆಕೆ ಆಡು ಮೇಯಿಸುವಾಗ ಅದೇ ಹಾದಿಯಲ್ಲಿ ಹೋಗುತ್ತಿದ್ದ ಗ್ರಾಮದ ಬಸಪ್ಪ ಬಾಳಪ್ಪ ಕಂಬಳಿ ಎಂಬಾತ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ. ಈ ವೇಳೆ ಆಕೆಯ ಮೈಮೇಲಿನ ಬಟ್ಟೆಯನ್ನೆಲ್ಲಾ ಹರಿದು ಅಟ್ಟಹಾಸ ಮೆರೆದಿದ್ದ.
ಇದರಿಂದ ಮನನೊಂದ ಮಹಿಳೆ ರಾತ್ರಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ. ಈ ಸಂಬಂಧ ನರೇಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಬಸಪ್ಪನನ್ನು ಪೊಲೀಸರು ಬಂಧಿಸಿದ್ದಾರೆ.