ಗದಗ: ಗರ್ಭಿಣಿಯನ್ನು ಆಸ್ಪತ್ರೆಗೆ ದಾಖಲಿಸಲು ಕರೆದೊಯ್ಯುವ ವೇಳೆ ಆ್ಯಂಬುಲೆನ್ಸ್ನಲ್ಲೇ ಹೆರಿಗೆಯಾದ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಗಜೇಂದ್ರಗಡ ತಾಲೂಕಿನ ನಿಡಗುಂದಿಕೊಪ್ಪ ಗ್ರಾಮದ ಕವಿತಾ ಪೂಜಾರಿಗೆ ರಕ್ತ ಕಡಿಮೆ ಇದ್ದ ಕಾರಣ ನಗರದ ಖಾಸಗಿ ಆಸ್ಪತ್ರೆಯಿಂದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ರೆಫರ್ ಮಾಡಲಾಗಿತ್ತು. ಅದರಂತೆ ಆಸ್ಪತ್ರೆಗೆ ತೆರಳುವಾಗ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಮಾರ್ಗಮಧ್ಯದಲ್ಲೇ ಸುಸೂತ್ರ ಹೆರಿಗೆ ನಡೆಯಿತು.