ಗದಗ : ತಾಲೂಕಿನ ಮುಳಗುಂದ ಸಮೀಪದ ಶಿರುಂಜ ಗ್ರಾಮದ ಮನೆಯೊಂದರಲ್ಲಿ ಗೃಹಿಣಿಯೊಬ್ಬಳ ಶವ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದ್ದು, ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ.
ಗ್ರಾಮದ ಮಲ್ಲಮ್ಮ ನಿಂಗಪ್ಪ ಹುಡೇದ (35) ಮೃತ ಗೃಹಿಣಿ ಎಂದು ಗುರುತಿಸಲಾಗಿದೆ. ಪತ್ನಿ ಸಾವಿನ ಬಳಿಕ ಪತಿ ನಿಂಗಪ್ಪ ನಾಪತ್ತೆಯಾಗಿದ್ದು, ಅನುಮಾನಕ್ಕೆ ಕಾರಣವಾಗಿದೆ.