ಗದಗ:ಜಿಲ್ಲೆಯ ಮುಂಡರಗಿ ತಾಲೂಕಿನ ಹಮ್ಮಿಗಿ ಗ್ರಾಮದಲ್ಲಿ ಹೊಲದಲ್ಲಿ ಕೆಲಸ ಮಾಡುವ ವೇಳೆ ವಿದ್ಯುತ್ ತಂತಿ ತಗುಲಿ ರೈತ ಮಹಿಳೆಯೋರ್ವಳು ಸಾವನ್ನಪ್ಪಿದ ಘಟನೆ ನಡೆದಿದೆ.
ಹೊಲದಲ್ಲಿ ಕೆಲಸ ಮಾಡುವಾಗ ವಿದ್ಯುತ್ ತಂತಿ ತಗುಲಿ ಮಹಿಳೆ ಸಾವು - ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಹಮ್ಮಿಗಿ ಗ್ರಾಮ
ವಿದ್ಯುತ್ ತಂತಿ ತಗುಲಿ ಹೊಲದಲ್ಲಿ ಕೆಲಸ ಮಾಡುತ್ತಿದ್ದ ರೈತ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಸರೋಜಾ ಈರಪ್ಪ ಯಾಲಕ್ಕಿ (35) ಮೃತ ಮಹಿಳೆ
ಹೊಲದಲ್ಲಿ ಕೆಲಸ ಮಾಡುವಾಗ ವಿದ್ಯುತ್ ತಂತಿ ತಗುಲಿ ಮಹಿಳೆ ಸಾವು
ಮಹಿಳೆ ಸರೋಜಾ ಅವರ ಪತಿ ಈರಪ್ಪಗೂ ಸಹ ಇದೇ ವೇಳೆ ವಿದ್ಯುತ್ ತಂತಿ ತಗುಲಿದೆ. ಆದರೆ ಅದೃಷ್ಟವಶಾತ್ ಈರಪ್ಪ ಪ್ರಾಣಪಾಯದಿಂದ ಪಾರಾಗಿದ್ದು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಭತ್ತದ ಗದ್ದೆಯಲ್ಲಿ ಕೆಲಸ ಮಾಡುವಾಗ ಈ ದುರ್ಘಟನೆ ಸಂಭವಿಸಿದ್ದು, ಪಕ್ಕದ ಹೊಲದಲ್ಲಿ ಹಾದು ಹೋದ ಮೋಟರ್ ಸಂಪರ್ಕದ ವಿದ್ಯುತ್ ತಂತಿ ಹಿಡಿದಿದ್ದರಿಂದ ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಸಿಪಿಐ ಶ್ರೀನಿವಾಸ ಮೇಟಿ, ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ. ಮುಂಡರಗಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.