ಗದಗ: ಗಾಳಿಪಟದ ದಾರ ಕತ್ತಿಗೆ ಸಿಲುಕಿ ಯುವಕನೊಬ್ಬ ಮೃತಪಟ್ಟಿರುವ ದಾರುಣ ಘಟನೆ ನಗರದಲ್ಲಿ ವರದಿಯಾಗಿದೆ. ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ನಾರಾಯಣ ದೇವರಕೆರೆ ನಿವಾಸಿ ರವಿ ಮೃತ ಯುವಕ ಎಂದು ಗುರುತಿಸಲಾಗಿದೆ. ಇಲ್ಲಿನ ಡಂಬಳ ನಾಕಾ ಬಳಿ ಕಳೆದ ಭಾನುವಾರ ಖಾರ ಹುಣ್ಣಿಮೆಯಂದು ಬೈಕ್‌ನಲ್ಲಿ ಹೋಗುವಾಗ ಗಾಳಿಪಟದ ದಾರ (ಮಾಂಜಾ ದಾರ) ಯುವಕನ ಕತ್ತು ಸೀಳಿತ್ತು. ಗಂಭೀರವಾಗಿ ಗಾಯಗೊಂಡಿದ್ದ ರವಿಯನ್ನು ಗದಗದ ಜಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಕಳೆದ ಆರು ದಿನಗಳ ಜೀವನ್ಮರಣದ ಹೋರಾಟದಲ್ಲಿ ಯುವಕ ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಅಪಾಯಕಾರಿ ಮಾಂಜಾ ದಾರವನ್ನು ನಿಷೇಧ ಮಾಡಿದ್ದರೂ ಅಲ್ಲಲ್ಲಿ ಅಕ್ರಮವಾಗಿ ಮಾರಾಟ ಮತ್ತು ಬಳಕೆ ಮಾಡುತ್ತಿರುವುದು ಕಂಡು ಬರುತ್ತಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಕಠಿಣ ಕ್ರಮ ಕೈಗೊಳ್ಳಬೇಕು. ಗಾಳಿಪಟದ ದಾರಕ್ಕೆ ಅಮಾಯಕ ಯುವಕ ಬಲಿಯಾಗಿರುವುದಕ್ಕೆ ಯಾರು ಹೊಣೆ? ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಗದಗ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮದ್ಯದೊಂದಿಗೆ ವಿಷ ಸೇವಿಸಿ ಪ್ರಾಣ ಸ್ನೇಹಿತರ ಆತ್ಮಹತ್ಯೆ ಯತ್ನ, ಓರ್ವ ಸಾವು:ಇಬ್ಬರು ಆತ್ನೀಯ ಸ್ನೇಹಿತರು ಮದ್ಯದ ಜೊತೆಗೆ ವಿಷದ ಮಾತ್ರೆ ಬೆರೆಸಿ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಸಮೀಪ ಗುರುವಾರ ನಡೆದಿದೆ. ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಗ್ರಾಮದ ಮನು (19) ಹಾಗೂ ಇತ್ತಲ ದೊಡ್ಡಿ ಗ್ರಾಮದ ಆನಂದ್ ಅಲಿಯಾಸ್ ನಾಗೇಂದ್ರ ಆತ್ಮಹತ್ಯೆಗೆ ಯತ್ನಿಸಿದವರು. ಇವರಲ್ಲಿ ನಾಗೇಂದ್ರ ಎಂಬಾತ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.