ಕರ್ನಾಟಕ

karnataka

ETV Bharat / state

ಗದಗದಲ್ಲಿ ಮಾರಕಾಸ್ತ್ರಗಳಿಂದ ಯುವಕನ ಕೊಲೆ: ಸಿಸಿಟಿವಿ ದೃಶ್ಯಾವಳಿ ವೈರಲ್ - ಗದಗ ಕೊಲೆ ಸುದ್ದಿ

ಗದಗದಲ್ಲಿ ಮಾರಕಾಸ್ತ್ರ ಬಳಸಿ ಯುವಕನ ಕೊಲೆ ಮಾಡಿರುವ ಸಿಸಿಟಿವಿ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

young man murder in Gadag, Gagda Murder visual captured in cctv, Gadag murder news, Gadag crime news, ಗದಗದಲ್ಲಿ ಯುವಕನ ಕೊಲೆ, ಗದಗ ಕೊಲೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ, ಗದಗ ಕೊಲೆ ಸುದ್ದಿ, ಗದಗ ಅಪರಾಧ ಸುದ್ದಿ,
ಗದಗನಲ್ಲಿ ಮಾರಕಾಸ್ತ್ರ ಬಳಸಿ ಯುವಕನ ಕೊಲೆ

By

Published : Jan 18, 2022, 1:59 PM IST

ಗದಗ: ಜಿಲ್ಲೆಯ ನರಗುಂದ ಪಟ್ಟಣದಲ್ಲಿ ಮೊನ್ನೆ ಎರಡು ಗುಂಪಗಳ ಮಧ್ಯೆ ನಡೆದ ಗಲಾಟೆಯ ಪರಿಣಾಮ,‌ ಒಂದು ಕೋಮಿನ ಯುವಕರು ಮಾರಕಾಸ್ತ್ರ ಬಳಸಿ ಹಲ್ಲೆ ನಡೆಸಿದ ಸಿಸಿಟಿವಿ ದೃಶ್ಯಾವಳಿ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಕೊಲೆಯ ಸಿಸಿಟಿವಿ ದೃಶ್ಯ ವೈರಲ್​

ಸೋಮವಾರ ರಾತ್ರಿ ಇಬ್ಬರು ಯುವಕರು 19ವರ್ಷದ ಯುವಕ ಶಮೀರ್ ಶಹಪೂರ್ ಎಂಬಾತನಿಗೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ನರಗುಂದ ಪುರಸಭೆಯ ಬಳಿ ಇಬ್ಬರು ಯುವಕರು ಸೇರಿ ಶಮೀರ್ ಎಂಬಾತನನ್ನು ಅಟ್ಟಾಡಿಸಿಕೊಂಡು ಹೊಡೆಯುತ್ತಿರುವ ಭಯಾನಕ ದೃಶ್ಯಗಳು ಬೆಚ್ಚಿ ಬೀಳಿಸುವಂತಿವೆ.

ಓದಿ:ಮೈಸೂರು: ಸಿನಿಮೀಯ ರೀತಿಯಲ್ಲಿ ಮೊಬೈಲ್ ಕಳ್ಳರನ್ನು ಹಿಡಿದ ಕಾನ್ಸ್‌ಟೇಬಲ್

ಸಿಸಿಟಿವಿಯಲ್ಲಿ ಸೆರೆಯಾಗಿರುವ ದೃಶ್ಯಗಳ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿ ಸಂಚಲನ ಸೃಷ್ಟಿಸಿದೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ
ಶಮೀರ್ ಶಹಪೂರ್ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಈ ಘಟನೆಗೆ ಸಂಬಂಧಿಸಿದಂತೆ ಪ್ರವೀಣ ಹಾಗೂ ಮಲ್ಲಿಕಾರ್ಜುನ ಹಿರೇಮಠ ಎಂಬ ಇಬ್ಬರು ಯುವಕರ ವಿರುದ್ಧ ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details