ಹಾಸನ:ಜಿಲ್ಲೆಯಲ್ಲಿ ಇಂದು ಹೊಸದಾಗಿ 114 ಕೋವಿಡ್ ಪ್ರಕರಣಗಳು ವರದಿಯಾಗಿವೆ. ಸೋಂಕಿತರ ಸಂಖ್ಯೆ 24,711ಕ್ಕೆ ಏರಿಕೆಯಾಗಿದೆ. ಮೃತರ ಸಂಖ್ಯೆ 422ಕ್ಕೆ ತಲುಪಿದೆ ಎಂದು ಆರೋಗ್ಯಾಧಿಕಾರಿ ಸತೀಶ್ ತಿಳಿಸಿದರು.
ಮಾಧ್ಯಮಕ್ಕೆ ಮಾಹಿತಿ ನೀಡಿರುವ ಅವರು, ಇಂದು ಬಿಡುಗಡೆಯಾದ 244 ಜನರು ಸೇರಿ ಈವರೆಗೆ 23,211 ಮಂದಿ ಗುಣಮುಖರಾಗಿದ್ದಾರೆ. 1078 ಸಕ್ರೀಯ ಪ್ರಕರಣಗಳಿದ್ದು, ಜಿಲ್ಲಾ ಕೋವಿಡ್ ಆಸ್ಪತ್ರೆ, ಕೋವಿಡ್ ಆರೈಕೆ ಕೇಂದ್ರಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರ ನಿಗಾ ಘಟಕದಲ್ಲಿ 39 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದರು.
ತಾಲೂಕುವಾರು ಪ್ರಕರಣ:ಇಂದು ದಾಖಲಾಗಿರುವ ಪ್ರಕರಣಗಳಲ್ಲಿ ಆಲೂರು -7, ಅರಕಲಗೂಡು -7, ಅರಸೀಕೆರೆ - 18, ಬೇಲೂರು-9, ಚನ್ನರಾಯಪಟ್ಟಣ-24, ಹಾಸನ - 40, ಹೊಳೆನರಸೀಪುರ - 5, ಸಕಲೇಶಪುರ - 4, ಒಟ್ಟು 114 ಪಾಸಿಟಿವ್ ಪ್ರಕರಣ ದಾಖಲಾಗಿದೆ ಎಂದು ತಿಳಿಸಿದರು.